Breaking News

ಕಚೇರಿಗೆ ಸರಿಯಾದ ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಗೇಟ್ ಬಂದ್ – ಜಿ.ಪಂ ಸಿಇಒ‌ ಕ್ಲಾಸ್

Spread the love

ಬೀದರ್: ಕಚೇರಿಗೆ ಸರಿಯಾದ ಸಮಯಕ್ಕೆ ಬಾರದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೇಟ್ ಬಂದ್ ಮಾಡಿ ಜಿಲ್ಲಾ ಪಂಚಾಯತ್‌  ಸಿಇಒ  ಕ್ಲಾಸ್ ತೆಗೆದುಕೊಂಡ ಘಟನೆ ಬೀದರ್‌ನಲ್ಲಿ ನಡೆದಿದೆ.

ಜಿಪಂ ಸಿಇಒ ಗಿತ್ತೆ ಮಾದವ್ ವಿಠಲರಾವ್ ಅವರು ಕಚೇರಿಗೆ ದಿಢೀರ್ ಭೇಟಿ ನೀಡಿ, ರಿಯಾಲಿಟಿ ಚೆಕ್ ನಡೆಸಿದ್ದಾರೆ. ಈ ವೇಳೆ ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್‌ ಬಂದ್‌ ಮಾಡಿ, ಬಿಸಿ ಮುಟ್ಟಿಸಿದ್ದಾರೆ.

ಕಚೇರಿ ಒಳಗಡೆ ಹೋಗಿ ರಿಯಾಲಿಟಿ ಚೆಕ್ ಮಾಡಿದಾಗ ಖಾಲಿ ಖಾಲಿ ಚೇರ್ ನೋಡಿ, ಸಿಇಒ ಶಾಕ್‌ ಆಗಿದ್ದಾರೆ. ಬಳಿಕ ಗೇಟ್ ಬಳಿ ನಿಂತು ತಡವಾಗಿ ಬಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕರ್ತವ್ಯ ಆ್ಯಪ್ ಬಳಕೆ ಕಡ್ಡಾಯವಿದ್ದರೂ ಕೂಡ ಯಾಕೆ ಲೇಟ್? ನೀವು ಫೀಲ್ಡ್‌ಗೆ ಹೋಗಿದ್ದಲ್ಲಿ ಕರ್ತವ್ಯ ಆ್ಯಪ್‌ನಲ್ಲಿ ಯಾಕೆ ನಮೂದಿಸಿಲ್ಲ ಎಂದು ತರಾಟೆ ತೆಗೆದುಕೊಂಡಿದ್ದಾರೆ. ಸಮಂಜಸ ಉತ್ತರ ಬರದ ಕಾರಣ ಒಂದು ದಿನದ ಸಂಬಳ ಕಟ್ ಮಾಡುವುದಾಗಿ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾರೆ. ಸದ್ಯ ಕ್ಲಾಸ್‌ ತೆಗೆದುಕೊಂಡು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ