Breaking News

ಡಿಕೆಶಿ ನಿವಾಸಕ್ಕೆ ಗೌತಮ್ ಅದಾನಿ ಭೇಟಿ – ಸುರಂಗ ರಸ್ತೆ ಯೋಜನೆ ಕುರಿತು ಮಹತ್ವದ ಚರ್ಚೆ

Spread the love

ಬೆಂಗಳೂರು: ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರ ನಿವಾಸಕ್ಕೆ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಭೇಟಿ ನೀಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಉದ್ದಿಮೆ ಅವಕಾಶಗಳ ಜತೆಗೆ, ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆ ಗುತ್ತಿಗೆ ಹಂಚಿಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಈ ಯೋಜನೆಗಾಗಿ ಸರ್ಕಾರ ಅಂದಾಜು 17,698 ಕೋಟಿ ವೆಚ್ಚ ನಿಗದಿಪಡಿಸಿತ್ತು. ಆದರೆ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಸಂಸ್ಥೆಯು 22,267 ಕೋಟಿ ರೂ. ಮೊತ್ತವನ್ನು ನಮೂದಿಸಿ ಅತಿ ಕಡಿಮೆ ಬಿಡ್  ಸಲ್ಲಿಸಿದ ಸಂಸ್ಥೆಯಾಗಿ ಹೊರಹೊಮ್ಮಿದೆ. ಸರ್ಕಾರದ ಅಂದಾಜು ಮೊತ್ತಕ್ಕಿಂತ ಇದು ಹೆಚ್ಚಾಗಿದ್ದರೂ, ಬಿಡ್ಡಿಂಗ್‌ನಲ್ಲಿ ಭಾಗವಹಿಸಿದ್ದ ಇತರೆ ಸಂಸ್ಥೆಗಳಿಗೆ ಹೋಲಿಸಿದರೆ ಅದಾನಿ ಸಂಸ್ಥೆಯ ಮೊತ್ತವೇ ಕಡಿಮೆಯಾಗಿದೆ.

ಟೆಂಡರ್ ಅಂತಿಮಗೊಳ್ಳುವ ಮುನ್ನವೇ ಸಂಸ್ಥೆಯು ಸುರಂಗ ಮಾರ್ಗ ಹಾದುಹೋಗುವ ಸ್ಥಳಗಳಲ್ಲಿ ಅಗತ್ಯವಿರುವ ಪ್ರಾಥಮಿಕ ಭೂ ಸಮೀಕ್ಷೆ ಹಾಗೂ ಮಣ್ಣಿನ ಗುಣಮಟ್ಟ ಪರೀಕ್ಷೆ ಸೇರಿದಂತೆ ಪ್ರಮುಖ ತಾಂತ್ರಿಕ ಪರೀಕ್ಷೆಗಳನ್ನು ಈಗಾಗಲೇ ಪೂರ್ಣಗೊಳಿಸಿದೆ.

ಅದಾನಿ ಸಂಸ್ಥೆಯು ಗುತ್ತಿಗೆ ಪ್ರಸ್ತಾವನೆಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿದ್ದು, ಅಧಿಕೃತವಾಗಿ ಕಾಮಗಾರಿ ವಹಿಸುವ ಸಂಬಂಧ ಮಾತುಕತೆಗಳು ನಡೆಯುತ್ತಿವೆ. ವೆಚ್ಚ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟದ ಅಂತಿಮ ಅನುಮೋದನೆ ಪಡೆಯಬೇಕಿರುವ ಹಿನ್ನೆಲೆಯಲ್ಲಿ, ಗೌತಮ್ ಅದಾನಿ ಅವರ ಈ ಭೇಟಿ ಮತ್ತು ಚರ್ಚೆ ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Spread the love

About Laxminews 24x7

Check Also

ಕಾಲು ಜಾರಿ ಹಳಿ ಮೇಲೆ ಬಿದ್ದ ವ್ಯಕ್ತಿ; ರೈಲು ಹರಿದು ಸ್ಥಳದಲ್ಲೇ ಸಾವು

Spread the loveಹಾಸನ: ರೈಲು ಹತ್ತುವಾಗ ಕಾಲು ಜಾರಿ ವ್ಯಕ್ತಿಯೊಬ್ಬರು ಹಳಿ ಮೇಲೆ ಬಿದ್ದಿದ್ದು, ಆತನ ಮೇಲೆಯೇ ರೈಲು ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ