Breaking News

ಮನೆಗಳಿಗೆ ಮಳೆಯ ನೀರು ನುಗ್ಗಿದ್ದು, ಜನರು ನೀರನ್ನು ಹೊರ ಹಾಕಲು ಹರಸಾಹಸ ಪಡ್ತಿದ್ದಾರೆ.

Spread the love

ಗದಗ: ಜಿಲ್ಲೆಯಲ್ಲಿ ರಾತ್ರಿಯಿಡೀ ಹಲವೆಡೆ ಭಾರಿ ಮಳೆಯಾಗಿದೆ. ಈ ಪರಿಣಾಮ ತಗ್ಗು ಪ್ರದೇಶದ ಮನೆಗಳಿಗೆ ಮಳೆಯ ನೀರು ನುಗ್ಗಿದ್ದು, ಜನರು ನೀರನ್ನು ಹೊರ ಹಾಕಲು ಹರಸಾಹಸ ಪಡ್ತಿದ್ದಾರೆ.

 ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಆದ್ರಹಳ್ಳಿ ಗ್ರಾಮದಲ್ಲಿ ಸುಮಾರು 25 ಮನೆಗಳಿಗೆ ಮಳೆ ನೀರು ನುಗ್ಗಿದೆ. ರಾತ್ರಿ ನೀರು ಹೊರಹಾಕಲು ಗ್ರಾಮಸ್ಥರು ಹರಸಾಹಸ ಪಟ್ಟಿದ್ದಾರೆ.

ಮನೆಯಲ್ಲಿದ್ದ ದವಸ ಧಾನ್ಯಗಳು, ವಸ್ತುಗಳೆಲ್ಲ ಹಾನಿಯಾಗಿವೆ. ಇನ್ನು ಮುಂಡರಗಿ‌ ಪಟ್ಟಣದಲ್ಲಿ ರಸ್ತೆಗಳು ಕೆರೆಯಂತಾಗಿವೆ. ಅನ್ನದಾನೀಶ್ವರ ಕಾಲೇಜು ಕ್ರೀಡಾಂಗಣ ಸಂಪೂರ್ಣ ಜಲಾವೃತಗೊಂಡಿದೆ. ಜಿಲ್ಲೆಯಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಹದಗೆಟ್ಟ ರಸ್ತೆಯಲ್ಲಿ ಸಿಲುಕಿ ಪ್ರಯಾಣಿಕರ ಪರದಾಟ:
ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಮಳೆಯಿಂದಾಗಿ ರಸ್ತೆಗಳು ಹದಗೆಟ್ಟಿವೆ. ರಸ್ತೆಯಲ್ಲಿ ಸರ್ಕಾರಿ ಬಸ್ ಸಿಲುಕಿಕೊಂಡು ಪ್ರಯಾಣಿಕರು ಪರದಾಡಿದ್ದಾರೆ. ಮೆಣಸಗಿ ಗ್ರಾಮದಿಂದ ಗದಗ ನಗರಕ್ಕೆ ಹೊರಟಿದ್ದ ಬಸ್, ಹದಗೆಟ್ಟ ರಸ್ತೆಯಲ್ಲಿ ಸಿಲುಕಿಕೊಂಡಿದೆ. ರಸ್ತೆ ದುರಸ್ತಿ ಮಾಡಿಸದ ಹಿನ್ನೆಲೆ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಸಿಬಿ ಮೂಲಕ ಸಿಲುಕಿದ ಬಸ್ ಹೊರ ತೆಗೆಯಲು ಕಾರ್ಯಾಚರಣೆ ನಡೆಯುತ್ತಿದೆ.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ