ಗದಗ: ಬುಧವಾರ ಜಿಲ್ಲೆನಲ್ಲಿ ಯಾವುದೇ ಕೊರೊನಾ ಸಟಿವ್ ಪ್ರಕರಣಗಳು ಧೃಢಪಟ್ಟಿಲ್ಲ. ಆದರೂ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಫೇಸ್ಬುಕ್ ಫಾಲೋವರ್ಸ್ ಪಾಸಿಟಿವ್ ಕೇಸ್ ಇದೆ ಎಂದು ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲೆಯ ಜನತೆ ತೀವ್ರ ಆತಂಕಕ್ಕೊಳಗಾಗಿದ್ದು, ಭಯಭೀತರಾಗಿದ್ದಾರೆ. ಕೊರೊನಾ ವೈರಸ್ ಪ್ರಕರಣದ ಕುರಿತು ಇಂದಿನ ಮೀಡಿಯಾ ಬುಲೆಟಿನ್ ನಲ್ಲಿಪ್ರಕಟವಾಗಿಲ್ಲ. ಆದರೆ ಫೆಸ್ಬುಕ್‍ನಲ್ಲಿ ಹಾಕಿದ್ದಾರೆ. ಇದು ಸುಳ್ಳು ಸುದ್ದಿಯಾಗಿದ್ದು, ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.
ಫೇಸ್ಬುಕ್‍ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಅವರನ್ನು ಟ್ಯಾಗ್ ಮಾಡಿ, ಕನಿಷ್ಠ 6 ಜನ ಅವರ ಅಭಿಮಾನಿಗಳು ಕೊರೊನಾ ಪಾಸಿಟಿವ್ ಪತ್ತೆ ಎಂದು ಬರೆದಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನರಗುಂದ ತಾಲೂಕಿನ ಕಲಕೇರಿ ವ್ಯಕ್ತಿಯೊರ್ವನಿಗೆ ಸೋಂಕು ಪತ್ತೆ ಆಗಿದೆ. ಸಚಿವರು ಹೋಗಿ ಪರಶೀಲಿಸಿ ಅಧಿಕಾರಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚಿಸಿದ್ದಾರೆ. ಇನ್ನಾದರೂ ತಾಲೂಕಿನ ಜನ ಅಲರ್ಟ್ ಆಗಿರಿ ಎಂದು ಸಚಿವರ ಹಿಂಬಾಲಕರು ಪೊಸ್ಟ್ ಮಾಡಿದ್ದಾರೆ.
ಇದು ಕಲಕೇರಿ ಜನರಿಗೆ ಮಾತ್ರವಲ್ಲ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ಯಾರಿಗೂ ಗೊತ್ತಾಗದ ಮಾಹಿತಿ ಸಚಿವ ಸಿ.ಸಿ.ಪಾಟೀಲ್ ಅವರ ಅಭಿಮಾನಿಗಳಿಗೆ ಹೇಗೆ ಗೊತ್ತಾಗುತ್ತದೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.
ಈ ಕುರಿತು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಪ್ರತಿಕ್ರಿಯಿಸಿದ್ದು, ಕೊರೊನಾ ಕುರಿತು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಈ ಹಿಂದೆಯೇ ಸಾಕಷ್ಟು ಬಾರಿ ಈ ಕುರಿತು ಅರಿವು ಮೂಡಿಸಲಾಗಿದೆ. ಅದರೂ ಸಚಿವರ ಅಭಿಮಾನಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.