ಗದಗ: ಅತ್ಯಾಚಾರ ಯತ್ನಕ್ಕೊಳಗಾದ ಮಹಿಳೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನಲ್ಲಿ ನಡೆದಿದೆ.
ಜೂನ್ 4ರಂದು ಮಹಿಳೆ ಕುರಿ ಮೇಯಿಸಲು ಹೋಗಿದ್ದರು. ಈ ವೇಳೆ ಯಾರು ಇಲ್ಲದ ಸಂದರ್ಭದಲ್ಲಿ ಸ್ಥಳೀಯ ಬಸಪ್ಪ ಕಂಬಳಿ ಎಂಬಾತ ಅತ್ಯಾಚಾರಕ್ಕೆ ಮುಂದಾಗಿದ್ದನು ಎಂಬ ಆರೋಪ ಕೇಳಿ ಬಂದಿದೆ. ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಸಂತ್ರಸ್ತೆ ವಿಷ ಸೇವಿಸಿದ್ದರು. ಕೂಡಲೇ ಕುಟುಂಬಸ್ಥರು ಮಹಿಳೆಯನ್ನು ಗದಗನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿ ದ್ದಾರೆ.
ಪೊಲೀಸರು ಆರೋಪಿ ಬಸಪ್ಪನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆ ಸಂಬಂಧ ಗಜೇಂದ್ರಗಡ ತಾಲೂಕಿನ ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 Laxmi News 24×7
Laxmi News 24×7
				 
		 
						
					 
						
					