Breaking News

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್…..

Spread the love

ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆ ಸರ್ಕಾರಿ ನೌಕರರ ಸಂಬಳ ಕಡಿತ ಮಾಡುವುದು, ತಡೆ ಹಿಡಿಯುವ ಕುರಿತು ಸಾಕಷ್ಟು ಚರ್ಚೆ ನಡೆದಿತ್ತು. ಇದೆಲ್ಲದಕ್ಕೂ ಇದೀಗ ತೆರೆ ಬಿದ್ದಿದ್ದು, ಏಪ್ರಿಲ್ ತಿಂಗಳ ಸಂಬಳ ನೀಡಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ನೌಕರರ ಪರ ಯಡಿಯೂರಪ್ಪ ಸರ್ಕಾರ ನಿಂತಿದೆ.

ಯಾವುದೇ ಕಡಿತ ಮಾಡದೇ ಏಪ್ರಿಲ್ ತಿಂಗಳ ಸಂಬಳ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದ್ದು, ಆರ್ಥಿಕ ಹೊರೆ ಆದರೂ ಪರವಾಗಿಲ್ಲ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಏಪ್ರಿಲ್ ಸಂಬಳ ಹಾಕುವ ನಿಟ್ಟಿನಲ್ಲಿ ಆರ್ಥಿಕ ಇಲಾಖೆ ಪ್ರಕ್ರಿಯೆ ಪ್ರಾರಂಭಿಸಿದೆ. ಸಂಬಳ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಕೆಲ ದಿನಗಳ ಹಿಂದೆ ಸ್ವತಃ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರಪ್ಪನವರು ಈ ತಿಂಗಳು ಸರ್ಕಾರಿ ನೌಕರರಿಗೆ ಸಂಬಳ ನೀಡುವುದೇ ಕಷ್ಟಕರವಾಗಿದೆ. ನೌಕರರು ಯಾವುದಕ್ಕೂ ಸಿದ್ಧರಾಗಿರಬೇಕು ಎಂಬ ಹೇಳಿಕೆ ನೀಡಿದ್ದರು. ಆದರೆ ಇದೀಗ ಸರ್ಕಾರ ಏಪ್ರಿಲ್ ತಿಂಗಳ ಸಂಬಳಕ್ಕೆ ಅನುಮತಿ ನೀಡಿದ್ದು, ಈ ಮೂಲಕ ಸರ್ಕಾರಿ ನೌಕರರ ಮೊಗದಲ್ಲಿ ಮಂದಹಾಸ ಮೂಡಿದೆ.


Spread the love

About Laxminews 24x7

Check Also

ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲ ಬದಲಾಗಬೇಕು. ಮನೆ ಖಾಲಿ ಮಾಡಬೇಕ:ಸಚಿವ ಸತೀಶ್ ಜಾರಕಿಹೊಳಿ

Spread the loveರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಬೆಳಗಾವಿ ಅಧಿವೇಶನದ ಬಳಿಕ ಸಂಪುಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ