ಗೋಕಾಕ: ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ.

ಸವದತ್ತಿ ತಾಲೂಕಿನ ಕಡಬಿ ಗ್ರಾಮದ ನಿವಾಸಿ ಅಜ್ಜಪ್ಪ ಹರಿಜನ(37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋಕಾಕ ತಾಲೂಕಿನ ಗಡಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಭೇಟಿ ಪರಿಶೀಲನೆ ನಡೆಸಿದ್ದಾರೆ, ಈ ಸಂಬಂಧ ಅಂಕಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Laxmi News 24×7