Breaking News

ದಾವಣಗೆರೆಯಲ್ಲಿ ಪ್ರಚಾರದ ವೇಳೆ ಮುಸ್ಲಿಮರಿಂದ ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ

Spread the love

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ  ಹಿನ್ನೆಲೆ ಪ್ರಚಾರದ ವೇಳೆ ಮುಸ್ಲಿಮರು ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು  ಪ್ರಚಾರದ ವೇಳೆ ಮುಸ್ಲಿಮರು ‘ಗೋ ಬ್ಯಾಕ್’ ಎಂದು ಘೋಷಣೆ ಕೂಗಿದ್ದಾರೆ. ದಾವಣಗೆರೆಯ ಬಾಷಾ ನಗರ ಮುಸ್ಲಿಂ ರಸ್ತೆಯಲ್ಲಿ ಪ್ರಚಾರದ ಸಂದರ್ಭದಲ್ಲಿ ಘಟನೆ ನಡೆದಿದ್ದು, ಸಾವಿರಾರು ಮುಸ್ಲಿಮರು ‘ಗೋ ಬ್ಯಾಕ್, ಗೋ ಬ್ಯಾಕ್ ಕಾಂಗ್ರೆಸ್’ ಎಂದು ಘೋಷಣೆ ಕೂಗಿದ್ದಾರೆ.

ಈ ಬಾರಿ ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವಂತೆ ಪ್ರಬಲ ಒತ್ತಾಯ ಕೇಳಿ ಬಂದಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದೆ. ಇದರಿಂದ ಮುಸ್ಲಿಂ ಸಮುದಾಯ ಕಾಂಗ್ರೆಸ್ ವಿರುದ್ಧ ಅಸಮಧಾನಗೊಂಡಿದ್ದು, ಕಾಂಗ್ರೆಸ್ ಪ್ರಚಾರದ ವೇಳೆ ‘ಗೋ ಬ್ಯಾಕ್ ಕಾಂಗ್ರೆಸ್’ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೇ ಪ್ರಚಾರ ನಡೆಸುತ್ತಾ ಕಾರಿನಲ್ಲಿ ತೆರಳಿದ್ದಾರೆ.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Spread the loveದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ