Breaking News

ಡಾ.ಕೋರೆಗೆ ಗೋವಾ ಮಾಜಿ ಸಿಎಂ ಕಾಮತ ಸನ್ಮಾನ

Spread the love

ಬೆಳಗಾವಿ: ಗೋವಾದ ಮಾಜಿ ಮುಖ್ಯಮಂತ್ರಿ, ಹಾಲಿ ಸಚಿವ ದಿಗಂಬರ ಕಾಮತ, ಗುರುವಾರ ನಗರದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆಯವರನ್ನು ಸನ್ಮಾಸಿದರು
ಈ ವೇಳೆ ಮಾತನಾಡಿ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪೂರ್ವ ಸೇವೆ ಗುರುತಿಸಿ ಡಾ.ಕೋರೆಯವರಿಗೆ  ಪದ್ಮಶ್ರೀ ಪ್ರಶಸ್ತಿ ಸಂದಿರುವುದು ಅವರ ಸಾಧನೆಗೆ ಸಲ್ಲಿಸಿದ ಗೌರವವಾಗಿದೆ ಎಂದು ಶ್ಲಾಘಿಸಿದರು.
ಸೋಮಣ್ಣ ಭೇಟಿ: ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಫೆ.7ರಂದು ಡಾ.ಕೋರೆಯವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ನಗರಕ್ಕೆ ಆಗಮಿಸುವ ಅವರು, ಶನಿವಾರ ಬೆಳಗ್ಗೆ 10.15ಕ್ಕೆ ಕೋರೆಯವರ ಮನೆಗೆ ಭೇಟಿ ನೀಡಿ ಅವರನ್ನು ಸನ್ಮಾನಿಸಲಿದ್ದಾರೆ. ಬಳಿಕ ಮಧ್ಯಾಹ್ನ 12.30ಕ್ಕೆ ಕಣಬರ್ಗಿ ಕೆಎಚ್‌ಬಿ ಲೇಔಟ್‌ನ ಆಶ್ರಯ ಫೌಂಡೇಷನ್‌ಗೆ
ಭೇಟಿ ನೀಡುವರು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ