ವಾರಣಾಸಿ : ಕೊರೊನಾ ವೈರಸ್ ಭಾರತದಲ್ಲಿ ಹರಡುತ್ತಿರುವ ಬೆನ್ನಲ್ಲೇ ಎಲ್ಲೆಡೆ ಆತಂಕ ಸೃಷ್ಟಿಯಾಗಿದೆ. ಸೋಂಕಿನಿಂದ ತಡೆಗಟ್ಟಲು ಮಾಸ್ಕ್ ಧರಿಸಿದ್ರೆ, ಇತ್ತ ದೇವರಿಗೆ ಮಾಸ್ಕ್ ಹಾಕಿರುವ ಘಟನೆ ವಾರಣಾಸಿಯಲ್ಲಿ ನಡೆದಿದೆ.
ಇಲ್ಲಿನ ವಿಶ್ವನಾಥ ದೇವಾಲಯದ ಅರ್ಚಕರು ದೇವರ ಮೂರ್ತಿಗೆ ಮಾಸ್ಕ್ ಹಾಕಿ ಪೂಜೆ ಮಾಡುತ್ತಿದ್ದಾರೆ, ಜೊತೆಗೆ ದೇವರ ವಿಗ್ರಹ ಮುಟ್ಟದಂತೆ ಭಕ್ತರಿಗೆ ಮನವಿ ಮಾಡಿದ್ದಾರೆ. ಜನರು ವಿಗ್ರಹಗಳನ್ನು ಮುಟ್ಟಿದರೆ, ಕೊರೋನಾ ಹರಡುವ ಸಾಧ್ಯತೆ ಇರುತ್ತದೆ” ಎಂದು ಹೇಳಿದ್ದಾರೆ. ದೇವಾಲಯದ ಅರ್ಚಕರು ಹಾಗೂ ಭಕ್ತರು ಮಾಸ್ಕ್ ಧರಿಸಿ ಪ್ರಾರ್ಥನೆ ಸಲ್ಲಿಸುತ್ತಿರುವ ದೃಶ್ಯವೂ ಕಂಡು ಬಂದಿತು.