Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಗೋಕಾಕ ಮತ್ತೆ ಸರಣಿ ಕಳ್ಳತನ….

ಗೋಕಾಕ ಮತ್ತೆ ಸರಣಿ ಕಳ್ಳತನ….

Spread the love

 

 

ಗೋಕಾಕ: ನಗರದ ಕಿಲ್ಲಾ ಆಚಾರ ಗಲ್ಲಿಯಲ್ಲಿ ಸೋಮವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಬೀಗ ಹಾಕಿರುವ ಮನೆಗಳಲ್ಲಿ ಕಳ್ಳತನ ನಡೆದಿವೆ. ಪೋಲಿಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪದೇ ಪದೆ ಕಳ್ಳತನಗಳು ನಡೆಯುತ್ತಿದ್ದುದರಿಂದ ನಗರದ ಜನರಲ್ಲಿ ಆತಂಕ ಮೂಡಿದೆ. ಕಳ್ಳರು 12 ಸಾವಿರ ರೂ. ದೋಚಿರುವುದಾಗಿ ಮಾಹಿತಿ ಲಭ್ಯವಾಗಿದೆ. ಈ ಮೊದಲು ವಿವೇಕಾನಂದ ನಗರದಲ್ಲಿ ಸರಣಿ ಕಳ್ಳತನ ನಡೆದಿತ್ತು. ಕಳ್ಳರನ್ನು ಹಿಡಿಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಕಳ್ಳರು ಈಗಾಗಲೇ ಅನೇಕ ಮನೆಗಳು, ಅಂಗಡಿಗಳನ್ನು ಒಡೆದು ಲಕ್ಷಾಂತರ ರೂ. ಮೌಲ್ಯದ ಆಭರಣ ಹಾಗೂ ನಗದು ಕಳ್ಳತನ ಮಾಡಿದ್ದಾರೆ. ಆದರೆ ಸ್ಥಳೀಯ ಪೊಲೀಸ್ ಇಲಾಖೆ ಮಾತ್ರ ನಗರದಲ್ಲಿ ರಾತ್ರಿ ಗಸ್ತು ತಿರುಗುತ್ತಿಲ್ಲ. ಹೀಗಾಗಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿವೆ ಎಂದು ಸ್ಥಳೀಯ ಸಾರ್ವಜನಿಕರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Spread the love ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಮೇಲೆ ಭಾರತಕ್ಕೆ ಕಪ್ಪುಚುಕ್ಕೆಯಾಗಿರುವ ಪಾಕ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ