ಗೋಕಾಕ : ಸಾಮಾಜಿಕ ಅಂತರ ಕಾಯ್ದುಕೊಂಡು ವಾರದ ಸಂತೆಯನ್ನು ನಡೆಸಲು ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿರುವ ಮಾರುಕಟ್ಟೆಯನ್ನು ವಾಲ್ಮೀಕಿ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡಲಾಗಿದೆ.
ಮೈದಾನದಲ್ಲಿ ಸಾಮಾಜಿ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಯ ಸಿಬ್ಬಂದಿ ಗುರುತು( ಮಾರ್ಕಿಂಗ್ ) ಮಾಡಿದ್ದಾರೆ. ಅಂಗಡಿಗಳಿಗೆ ಹಾಗೂ ಗ್ರಾಹಕರಿಗೆ ಮಾರ್ಕಿಂಗ್ ಮಾಡಲಾಗಿದ್ದು, ಆ ವ್ಯಾಪ್ತಿಯಲ್ಲೇ ನಿಂತು ವ್ಯಾಪಾರ- ವಹಿವಾಟು ನಡೆಸಲಾಗುತ್ತಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮಾರ್ಕಿಂಗ್ ಮಾಡಲಾಗಿದ್ದು, ಅಲ್ಲಿಯೇ ನಿಂತು ತರಕಾರಿಗಳನ್ನು ಖರೀದಿ ಮಾಡಬೇಕಾಗಿದೆ. ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ನಿಮ್ಮ ಸಹಕಾರ ಮುಖ್ಯ. ಆದ ಕಾರಣ ನಮ್ಮ ಸಿಬ್ಬಂದಿ ಹಾಕಿರುವ ಮಾರ್ಕಿಂಗ್ ನಲ್ಲಿ ನಿಂತುಕೊಂಡು ವ್ಯಾಪಾರ ನಡೆಸಿ, ಜತೆಗೆ ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳಿ ಎಂದು ಗ್ರಾಹಕರು ಹಾಗೂ ವ್ಯಾಪಾರಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಸಹಕಾರ ನೀಡುತ್ತಿದ್ದು, ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿರುವ ದೃಶ್ಯಗಳು ಸಹ ಕಂಡು ಬಂದವು.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576*
*Laxmi News*