Breaking News

ಲಕ್ಷ್ಮೀನ ಶಿಕ್ಷಣ ಸಂಸ್ಥೆಯಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನೆಯನ್ನು ಸುವರ್ಣಾ ಭೀಮಶಿ ಜಾರಕಿಹೊಳಿ ನೆರವೇರಿಸಿದರು.

Spread the love

 

ಗೋಕಾಕ: ಮಕ್ಕಳಿಗೆ ಉಪಕರಣಗಳೊಂದಿಗೆ ಪ್ರಾಯೋಗಿಕವಾಗಿ ಕಲಿಸುವ ಕಲಿಕಾ ಕ್ರಮವು ಅತ್ಯಂತ ಪರಿಣಾಮಕಾರಿ ಆಗಿರುತ್ತದೆ ಎಂದು ಬೆಂಗಳೂಇನ ಕ್ರೀಡೋ ಸಂಸ್ಥೆಯ ಆಯೇಷಾ ಶೇಖ ಹೇಳಿದರು.
ಶನಿವಾರ ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟಿನಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಅಧುನಿಕ ಕಲಿಕಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು.
ಕಲಿಕೆಯು ಕಂಠ ಪಾಠಕ್ಕೆ ಸೀಮಿತವಾಗದೇ ಅರ್ಥ ಪೂರ್ಣವಾಗಿರಬೇಕು. ಮಕ್ಕಳು ಕೇಳುವ ಕೂತೂಹಲಕಾರಿ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಬೇಕು. ಅವರಿಗೆ ಮನೆ ಮತ್ತು ಶಾಲೆಗಳಲ್ಲಿ ಉತ್ತಮವಾದ ವಾತಾವರಣ ಕಲ್ಪಿಸುವುದರಿಂದ ಅವರ ಸರ್ವಾಂಗೀಣ ಬೆಳವಣಿಗೆಯಾಗಿ ಪ್ರತಿಭಾನ್ವಿತರಾಗಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮವನ್ನು ಸಂಸ್ಥೆಯ ಉಪಾಧ್ಯಕ್ಷೆ ಸುವರ್ಣ ಭೀಮಶಿ ಜಾರಕಿಹೊಳಿ ಉದ್ಘಾಟಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿದೇಶಕ ಸನತ್ ಜಾರಕಿಹೊಳಿ, ಅಂಗ ಸಂಸ್ಥೆಗಳ ಮುಖ್ಯೋಪಾಧ್ಯಾಯರಾದ ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗ್ನೀಸ್, ಪಿ.ವಿ.ಚಚಡಿ, ಉಪನ್ಯಾಸ ಅರುಣ ಪೂಜೇರ, ಶಿಕ್ಷಕಿ ನೈನಾ ಪಾರೂಳಕರ ಇದ್ದರು.
ಶಿಕ್ಷಕಿ ಪ್ರಿಯಾಂಕಾ ಹಂದಿಗುಂದ ಸ್ವಾಗತಿಸಿ, ವಂದಿಸಿದರು.


Spread the love

About Laxminews 24x7

Check Also

‘ಪಡಿತರ ಅಕ್ರಮ ತಡೆಗೆ ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ’: ಗ್ಯಾರಂಟಿ ಅನುಷ್ಠಾನ ಸಮಿತಿ ಸೂಚನೆ

Spread the loveಗಂಗಾವತಿ: “ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಅನ್ನಭಾಗ್ಯ’ ಪಡಿತರ ಫಲಾನುಭವಿಗಳಿಗೆ ತಲುಪದೇ ಬಹುತೇಕ ಧಾನ್ಯ ಕಳ್ಳರ ಪಾಲಾಗುತ್ತಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ