Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

Spread the love

ಗೋಕಾಕ : ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಹಲವು ವರ್ಷಗಳಿಂದಲೂ ಇದೆ. ಆ ವಿಷಯವಾಗಿ ವಾಲ್ಮೀಕಿ ಜಾತ್ರೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಸಹ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ ಜಾತ್ರೆ ಸ್ವಾಮೀಗಳ ನೇತೃತ್ವದಲ್ಲಿ ನಡೆಯಲಿದೆ.

ನಮ್ಮ ಸಮಾಜದ ಸಾಮಾಜಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿಹಿಡಿಯಲು ವಾಲ್ಮೀಕಿ ಜಾತ್ರೆ ಆಯೋಜನೆ ಮಾಡಲಾಗಿದ್ದು, ಬುಡಕಟ್ಟು ಜನಾಂಗ ಎದುರಿಸುತ್ತಿರುವ ಸವಾಲುಗಳ ಕುರಿತು ವಿಚಾರ ಗೋಷ್ಠಿ ನಡೆಯಲಿದೆ.

ವಾಲ್ಮೀಕಿ ಜಾತ್ರೆ ಇಂದಿನಿಂದ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಾಲ್ಮೀಕಿ ಸಮಾಜದ ಜನರು ಭಾಗವಹಿಸಲಿದ್ದಾರೆ. ಎಂದರು. ಸಮಾಜದ ಜನರನ್ನು ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇವಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಬಡವರಿಗಲ್ಲ, ರೈಸ್ ಮಿಲ್‍ಗಳಿಗೆ ಸೇರುತ್ತಿದೆ ‘ಅನ್ನಭಾಗ್ಯ’ ಅಕ್ಕಿ

Spread the loveಕೋಲಾರ: ಬಡವರ ಹಸಿವು ನೀಗಿಸಲು ಸರ್ಕಾರ ಕೊಡುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಜಿಲ್ಲೆಯ ಬಂಗಾರಪೇಟೆಯ ಕಾಳಸಂತೆಯಲ್ಲಿ ರಾಜಾರೋಷವಾಗಿ ಮಾರಾಟವಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ