Breaking News
Home / new delhi / ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ ಉತ್ಸವ
????????????????????????????????????

ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ ಉತ್ಸವ

Spread the love

ಗೋಕಾಕ: ನಗರದ ಶೂನ್ಯ ಸಂಪಾದನ ಮಠದಿಂದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭವು ಮಾ-1 ರಿಂದ 4ರವರೆಗೆ ಅತೀ ವಿಜೃಂಭನೆಯಿಂದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಜರುಗಲಿದೆ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಕಾರ್ಯದರ್ಶಿ ವಿವೇಕ ಜತ್ತಿ ಹೇಳಿದರು.
ಅವರು ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ ಉತ್ಸವದ ನಿಮಿತ್ಯ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಮಾ-1 ರಂದು ಮುಂಜಾನೆ 8 ಗಂಟೆಗೆ ಶಾಲಾ ವಿದ್ಯಾರ್ಥಿಗಳಿಂದ ಅರಿವು-ಅಕ್ಷರ-ಆರೋಗ್ಯ ಕಾಲ್ನಡಿಗೆ ಜಾಥಾ ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದವರೆಗೂ ನಡೆಯಲಿದೆ.8.30 ಗಂಟೆಗೆ ಷಟಸ್ಥಲ ಧ್ವಜಾರೋಹಣವನ್ನು ಜಿಲ್ಲಾಧಿಕಾರಿ ಎಮ್.ಜಿ.ಹಿರೇಮಠ ನೆರೆವೇರಿಸುವರು. ಸಾನಿಧ್ಯವನ್ನು ಇಲ್ಲಿಯ ಮುಪ್ಪಯ್ಯನಮಠದ ಶ್ರೀ ರಾಚೂಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ, ಸಂಜೆ 6 ಗಂಟೆಗೆ ಯುವ ಸಮಾವೇಶವನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಲಿದ್ದು, ಸಾನಿಧ್ಯವನ್ನು ಮರಡಿಮಠದ ಶ್ರೀ ಪವಾಡೇಶ್ವರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಹಿಸುವರು. ಮುಖ್ಯಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೋಲಿಸ ವರಿಷ್ಠಾಧಿಕಾರಿ ರವಿ ಚಣ್ಣನ್ನವರ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಮಾ-2ರಂದು ಸಂಜೆ 6 ಗಂಟೆಗೆ ಕಾಯಕಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ಜರುಗಲಿದ್ದು, ಶ್ರೀಮಠದಿಂದ ನೀಡುವ ಕಾಯಕಶ್ರೀ ಈ ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಮತ್ತು ಫಲ ತಾಂಬೂಲಗಳನ್ನು ಒಳಗೊಂಡ ಕಾಯಕಶ್ರೀ ಪ್ರಶಸ್ತಿಯನ್ನು ಈ ಬಾರಿ ಆರ್ಟ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ರವಿ ಶಂಕರ ಗುರೂಜೀ ಅವರಿಗೆ ನೀಡಿ ಗೌರವಿಸಲಾಗುವುದು. ಸಾನಿಧ್ಯವನ್ನು ದುರದುಂಡೇಶ್ವರ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ವಹಿಸುವರು. ಅಧ್ಯಕ್ಷತೆಯನ್ನು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಹಿಸಲಿದ್ದು, ಮುಖ್ಯಅತಿಥಿಗಳಾಗಿ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೋ ರಾಮಚಂದ್ರಗೌಡ, ಬೆಂಗಳೂರಿನ ಬೋಸ್ಕ್ ಕಂಪನಿ ಪ್ರಧಾನ ವ್ಯವಸ್ಥಾಪಕ ಬಿ.ವಿ.ನವೀನ ಆಗಮಿಸಲಿದ್ದಾರೆ ಎಂದರು.
ಮಾ-3 ರಂದು ಸಂಜೆ 6 ಗಂಟೆಗೆ ಮಹಿಳಾ ಸಮಾವೇಶ ಜರುಗಲಿದ್ದು, ಸಾನಿಧ್ಯವನ್ನು ಉಪ್ಪಿನ ಬೆಟಗೇರಿಯ ಮೂರುಸಾವಿರಮಠದ ಶ್ರೀ ಕುಮಾರ ವೀರುಪಾಕ್ಷ ಮಹಾಸ್ವಾಮಿಗಳು ವಹಿಸಲಿದ್ದು ಅಧ್ಯಕ್ಷತೆ ಶರಣ ಸಂಸ್ಕೃತಿ ಉತ್ಸವ ಸಮಿತಿಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಹಿಸಲಿದ್ದು, ಮುಖ್ಯಅತಿಥಿಗಳಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ, ಆಯ್‍ಜಿಪಿ ಡಿ.ರೂಪಾ ಆಗಮಿಸಲಿದ್ದಾರೆ ಎಂದರು.
ಮಾ-4 ರಂದು ಮುಂಜಾನೆ ಶ್ರೀಮಠದ ಕರ್ತೃ ಗದ್ದುಗೆಗೆ ಅಭಿಷೇಕ ಹಾಗೂ ಬಿಲ್ವಾರ್ಚನೆ, ಸಹಸ್ರ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಫಲ್ಲಕ್ಕಿ ಉತ್ಸವ, ಕುಂಭಮೇಳ, ಮಧ್ಯಾಹ್ನ ಮಹಾಪ್ರಸಾದ ಜರುಗಲಿದೆ ಎಂದು ಹೇಳಿದರು.
ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ ಅವರು ಮಾತನಾಡಿ ಪ್ರತಿದಿನ ನಡೆಯುವ ಕಾರ್ಯಕ್ರಮಗಳಲ್ಲಿ ಸಮಾಜದ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದ ಶರಣರಿಗೆ ಗೌರವ ಸನ್ಮಾನ ಹಾಗೂ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ, ಮಹಾಪ್ರಸಾದ ಜರುಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಶ್ರೀಮಠದ ಭಕ್ತರು, ಅಭಿಮಾನಿಗಳು, ಗಣ್ಯರು ಪಾಲ್ಗೊಂಡು ಶರಣ ಸಂಸ್ಕøತಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮೈಲಾರಲಿಂಗ ಉಪ್ಪಿನ, ಪ್ರಶಾಂತ ಕುರಬೇಟ, ಶಿವಲಿಂಗಪ್ಪ ಗುರಾಣಿ ಇದ್ದರು.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ