Breaking News

16ನೇ ಶರಣ ಸಂಸ್ಕೃತಿ ಉತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ ಫಲ್ಲಕಿ ಉತ್ಸವದಲ್ಲಿ ಪಾಲ್ಗೊಂಡ ಶ್ರೀಗಳು ಹಾಗೂ ಗಣ್ಯರು.

Spread the love

ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವದ ಕೊನೆಯ ದಿನವಾದ ಗುರುವಾರದಂದು ಮುಂಜಾನೆ ಫಲ್ಲಕ್ಕಿ ಉತ್ಸವಕ್ಕೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಚಾಲನೆ ನೀಡಿದರು.
ಉತ್ಸವವು ನಗರದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳ ಹಾಗೂ ವಚನ ತಾಡೋಲೆ ಪ್ರತಿಗಳು, ವಿಶ್ವ ಗುರು ಬಸವಣ್ಣನವರ ಭಾವಚಿತ್ರ ಹಾಗೂ ಸಕಲ ಭಕ್ತರೊಂದಿಗೆ ಮೆರವಣಿಗೆ ಮೂಲಕ ಸಂಚರಿಸಿ ಶ್ರೀಮಠದಲ್ಲಿ ಮಧ್ಯಾಹ್ನ ಮಹಾಪ್ರಸಾದೊಂದಿಗೆ ಸಂಪನ್ನಗೊಂಡಿತು.
ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿ, ಬಟಕುರ್ಕಿ ಸಿದ್ದಲಿಂಗ ಮಹಾಸ್ವಾಮಿ ಹಾಗೂ ಮುಪ್ಪಯ್ಯನಮಠದ ಶ್ರೀ ರಾಚೂಟೇಶ್ವರ ಮಹಾಸ್ವಾಮಿಗಳ ನೇತ್ರತ್ವದಲ್ಲಿ ಶ್ರೀಮಠದ ಕರ್ತೃ ಗದ್ದುಗೆಗೆ ಅಭಿಷೇಕ ಹಾಗೂ ಬಿಲ್ವಾರ್ಚನೆ, ಸಹಸ್ರ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮಗಳು ಜರುಗಿದವು.
ಈ ಸಂದರ್ಭಗಳಲ್ಲಿ ಬಸನಗೌಡ ಪಾಟೀಲ, ಮಲ್ಲಿಕಾರ್ಜುನ ಈಟಿ, ವಿವೇಕ ಜತ್ತಿ, ಶಕುಂತಲಾ ಕಟ್ಟಿ, ಬಸವರಾಜ ಖಾನಪ್ಪನವರ, ಮಹಾಂತೇಶ ತಾಂವಶಿ, ಎಸ್.ಕೆ.ಮಠದ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ