Breaking News

ಗೋಕಾಕ: ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಮೆಳವಂಕಿ ಗ್ರಾಮದ ಗೌಡನ ಕ್ರಾಸ್‍ದಲ್ಲಿ ಪ್ರತಿಭಟನೆ ನಡೆಸುತ್ತಿರುವುದು.

Spread the love

ಗೋಕಾಕ: ರಮೇಶ ಜಾರಕಿಹೊಳಿ ಅವರ ಮೆಳವಂಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡಿಬಟ್ಟಿ, ಚಿಗಡೊಳ್ಳಿ ಮತ್ತು ಮೆಳವಂಕಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಶನಿವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಹಿರೇಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು.
ಮೆಳವಂಕಿ ಗ್ರಾಮದ ಗೌಡನ ಕ್ರಾಸದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿ, ನಕಲಿ ಸಿಡಿ ಸೃಷ್ಟಿಕೃತ ದಿನೇಶ ಕಲ್ಲಹಳ್ಳಿ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ರಮೇಶ ಜಾರಕಿಹೊಳಿ ಅವರ ಏಳ್ಗೆಯನ್ನು ಸಹಿಸದೇ ಕೆಲ ಕುತಂತ್ರಿಗಳು ಅವರಿಗೆ ಹೆಸರಿಗೆ ಮಸಿ ಬಳಿಯುವ ಕಾರ್ಯವನ್ನು ಮಾಡುತ್ತಿದ್ದಾರೆ. ರಮೇಶ ಅವರ ಪ್ರಭಾವ ಕುಗ್ಗಿಸಲು ಸೆಕ್ಸ್ ಸಿಡಿಯನ್ನು ಎಡಿಟ್ ಮಾಡಿ ವರ್ಚಿಸಿಗೆ ದಕ್ಕೆಯನ್ನು ತರಲಾಗಿದ್ದು, ಅವರ ಜನಪ್ರೀಯತೆಯನ್ನು ಅರಗಿಸಿಕೊಳ್ಳಲಾಗದೇ ಪ್ರಭಾವಿ ವ್ಯಕ್ತಿಗಳು ಷಡ್ಯಂತ್ರ ರೂಪಿಸಿದ್ದು ಸಿಡಿಯ ಬಗ್ಗೆ ಸತ್ಯ ಸಂಗತಿ ಹೊರಬರಬೇಕು. ಈ ಪ್ರಕರಣದ ಸಮಗ್ರ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಿದಾಗ ನೈಜ ಸಂಗತಿ ಹೊರಬಿಳಲಿದ್ದು ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಬಸನಗೌಡ ಪಾಟೀಲ(ಮೆಳವಂಕಿ) ಸಿದ್ದಪ್ಪ ಹಂಜಿ, ರಮೇಶ ಬೀರನಗಡ್ಡಿ, ಮಹಾದೇವಪ್ಪ ಪತ್ತಾರ, ಅಲ್ಲಪ್ಪ ಕಂಕಣವಾಡಿ, ಈರಪ್ಪ ಬೀರನಗಡ್ಡಿ, ಸತ್ತೆಪ್ಪ ಬಬಲಿ, ಮುತ್ತೆಪ್ಪ ಹಡಗಿನಾಳ, ಸಣ್ಣದೊಡ್ಡಪ್ಪ ಕರೆಪ್ಪನವರ, ನಾಗಪ್ಪ ಮಂಗಿ, ಶಂಕರ ಸಣ್ಣಲಗಮನ್ನವರ ಗ್ರಾ.ಪಂ ಸದಸ್ಯರು, ಪಿಕೆಪಿಎಸ್ ಸದಸ್ಯರು ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ