ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ.
ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ. ಮಾ.9 ರಿಂದ ಮಾ.24 ರವರೆಗೆ ಒಟ್ಟು 15 ದಿನಗಳವರೆಗೆ ಸುಮಾರು 6.80 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಬೀಳಗಿ, ಜಮಖಂಡಿ ತಾಲೂಕುಗಳ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಅನಾವಶ್ಯಕವಾಗಿ ನೀರನ್ನು ಪೋಲು ಮಾಡಬಾರದು. ಕೃಷಿ ಜಮೀನುಗಳಿಗೆ ಅನುಕೂಲವಾಗಲು ಹಿಡಕಲ್ ಜಲಾಶಯದಿಂದ ಎಲ್ಲ ಕಾಲುವೆಗಳಿಗೆ ನೀರು ಹರಿಸಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
Check Also
ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ
Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …