ಗೋಕಾಕ: ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿಘ್ನಹಾರ ಪಾಟೀಲ, ಸಚೀನಗೌಡ, ರಾಕೇಶ ಕೊಳದುರ್ಗಿ ಇವರು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪ್ರಾಯೋಗಿಕ ವಿಭಾಗದಲ್ಲಿ ಚಿನ್ನ, ಲಿಖಿತ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಈ ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಚೇರಮನ್ ಲಖನ ಜಾರಕಿಹೊಳಿ, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯಿನಿ ಸಿ.ಬಿ.ಪಾಗದ, ತರಬೇತಿದಾರ ಅಮೃತ ಕದ್ದು ಸೇರಿದಂತೆ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
Laxmi News 24×7