Breaking News

ಗೋಕಾಕ: ಲೋಕಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.

Spread the love

ಗೋಕಾಕ: ಕಳೆದ 30 ವರ್ಷಗಳಿಂದ ಎಲ್ಲ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸುತ್ತಿದ್ದು, ಈ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮತದಾರರಲ್ಲಿ ವಿನಂತಿಸಿದರು.
ಮಂಗಳವಾರದಂದು ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡ ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿ ಮಾತನಾಡಿದ ಅವರು, ನಾನು ಹುಟ್ಟಿ ಬೆಳೆದ ನನ್ನೂರಿನ ಜನ ನನಗೆ ಆಶೀರ್ವಾದ ಮಾಡುತ್ತಾರೆಂಬ ಬಲವಾದ ನಂಬಿಕೆಯಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಪಕ್ಷಾತೀತವಾಗಿ ನನ್ನನ್ನು ಬೆಂಬಲಿಸುವಂತೆ ಕೋರಿದರು.
ಕಳೆದ ಹಲವಾರು ದಶಕಗಳಿಂದ ಗೋಕಾಕ ತಾಲೂಕಿನಲ್ಲಿ ಶೈಕ್ಷಣಿಕವಾಗಿ, ಸಾಸಂಸ್ಕøತಿವಾಗಿ, ಸಾಮಾಜಿಕವಾಗಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇನೆ. ಎಲ್ಲ ಸಮುದಾಯದವರಿಗೂ ರಾಜಕೀಯ ಪ್ರಾತಿನಿಧ್ಯತೆಯನ್ನು ನೀಡಲು ಶ್ರಮಿಸಿದ್ದೇನೆ. ಇನ್ನೂ ಹೆಚ್ಚಿನ ಅಭಿವೃದ್ದಿ ಪರ ಕಾರ್ಯ ನಿರ್ವಹಿಸಲು ತಮ್ಮ ಮತಗಳನ್ನು ನೀಡಿ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ನಗರಾಧ್ಯಕ್ಷರಾದ ಸಿದ್ದಲಿಂಗ ದಳವಾಯಿ, ಅಶೋಕ ಪಾಟೀಲ, ಮುಖಂಡರಾದ ಮೋಸಿನ್ ಖೋಜಾ, ವಿವೇಕ ಜತ್ತಿ ಸೇರಿದಂತೆ ಅನೇಕರು ಇದ್ದರು.

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576*
*Laxmi News*

 

 


Spread the love

About Laxminews 24x7

Check Also

ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ