Breaking News
Home / Uncategorized / ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಯೋಧನ ಅಂತ್ಯಕ್ರಿಯೆ

ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಯೋಧನ ಅಂತ್ಯಕ್ರಿಯೆ

Spread the love

ಗೋಕಾಕ : ಕಳೆದ ನಾಲ್ಕೈದು ದಿನಗಳ ಹಿಂದೆ ನ್ಯಾಗಾಲ್ಯಾಂಡ್ ಗಡಿ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಪಘಾತದಲ್ಲಿ ಅಸುನೀಗಿದ್ದ ಗೋಕಾಕ ತಾಲ್ಲೂಕಿನ ವೀರಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಜರುಗಿತು.

 

ಶಿವಾಪುರ ಗ್ರಾಮದ ಯೋಧ ಮಂಜುನಾಥ ಗೌಡಣ್ಣವರ (38) ಯೋಧ ಅಫಘಾತದಲ್ಲಿ ಸಾವನ್ನಪ್ಪಿದ್ದರು. ಮೃತ ಯೋಧನ ಪಾರ್ಥಿವ ಶರೀರ ಬೆಂಗಳೂರಿನಿಂದ ಇಂದು ಬೆಳಿಗ್ಗೆ 7 ಗಂಟೆಗೆ ಯೋಧನ‌ ಸ್ವಗ್ರಾಮ ಗೋಕಾಕ್ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಕರೆತರಲಾಯಿತು.

 

ಯೋಧನ ಪಾರ್ಥಿವ ಶರೀರವನ್ನು ಕೆಲ ಹೊತ್ತು ಸರ್ಕಾರಿ ಶಾಲೆಯಲ್ಲಿ ಕುಟುಂಬಸ್ಥರು ಹಾಗೂ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಯಿತು. ಬಳಿಕ ಗ್ರಾಮದಲ್ಲಿ ಪಾರ್ಥಿವ ಶರೀರವನ್ನು ಮೆರವಣಿಗೆ ನಡೆಸಿದರು.

 

ಸಂಸದೆ ಮಂಗಲಾ ಅಂಗಡಿ, ಅಂಬಿರಾವ ಪಾಟೀಲ , ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ತಹಶಿಲ್ದಾರ್ ಪ್ರಕಾಶ ಹೊಳೆಪ್ಪಗೋಳ ಸೇರಿದಂತೆ ಇತರ ಅಧಿಕಾರಿಗಳು, ಜನಪ್ರತಿನಿಧಿಗಳು ವೀರ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ಮೃತ ಯೋಧನ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಶಿವಾಪುರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.


Spread the love

About Laxminews 24x7

Check Also

ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

Spread the loveಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆಂಗಳೂರು, ಮೇ. 03 : ಬೆಂಗಳೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ