Breaking News

ಕೋವಿಡ್ ಸೋಂಕಿತರಿಗೆ ದಿನಬಳಕೆ-ಮೆಡಿಕಲ್‌ ಕಿಟ್‌ ವಿತರಣೆ

Spread the love

ಗೋಕಾಕ: ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ ಎಂದು ಹಿರಿಯ ತಜ್ಞ ವೈದ್ಯ ಡಾ| ಆರ್‌.ಎಸ್‌. ಬೆಣಚಿನಮರಡಿ ಹೇಳಿದರು.

ಮಂಗಳವಾರ ಇಲ್ಲಿಯ ಎನ್‌ಎಸ್‌ಎಫ್‌ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ರೋಗಿಗಳಿಗೆ ಕೊಡಮಾಡಿದ ದಿನಬಳಕೆಯ ಮತ್ತು ಮೆಡಿಕಲ್‌ ಕಿಟ್‌ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಲಾಕ್‌ಡೌನ್‌ ಸಮಯದಲ್ಲಿ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ ದಿನಸಿ ಕಿಟ್‌ ವಿತರಿಸಿದ್ದ ಶಾಸಕರು ಈಗ ಕೋವಿಡ್ ಸೋಂಕಿತರಿಗೆ ದಿನಬಳಕೆ ಮತ್ತು ಮೆಡಿಕಲ್‌ ಕಿಟ್‌ ಗಳನ್ನು ನೀಡುವ ಮೂಲಕ ಯಾರೂ ಮಾಡದ ಸಮಾಜಮುಖೀ ಕೆಲಸ ಮಾಡುವ ಮೂಲಕ ಇಡೀ ರಾಜ್ಯ ಹಾಗೂ ರಾಷ್ಟ್ರಕ್ಕೆ ಮಾದರಿಯಾಗುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹಾಗೂ ಮೂಡಲಗಿ ತಹಶೀಲ್ದಾರ ದಿಲಶಾದ್‌ ಮಹಾತ ಮಾತನಾಡಿ, ಕಿಟ್‌ನಲ್ಲಿ ರೋಗಿಗಳಿಗೆ 10 ದಿನಕ್ಕೆ ಬೇಕಾಗುವ ದಿನಬಳಕೆ ಮತ್ತು ಔಷಧೋಪಚಾರದ ಸಾಮಗ್ರಿಗಳಿವೆ. ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಚಿಕಿತ್ಸೆ ನೀಡುವಂತೆ ನಮಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು. ತಾಲೂಕಾ ಆರೋಗ್ಯಾಧಿಕಾರಿ ಡಾ| ಜಗದೀಶ ಜಿಂಗಿ ಮಾತನಾಡಿ, ಕೋವಿಡ್ ಸೋಂಕಿತರಿಗೆ ಮನೋಧೆ„ರ್ಯ ತುಂಬುವ ಕೆಲಸ ಮಾಡುತ್ತಿರುವ ಬಾಲಚಂದ್ರ ಜಾರಕಿಹೊಳಿ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಆಂಟಿನ್‌, ಗೋಕಾಕ ಸಿಪಿಐ ಗೋಪಾಲ ರಾಠೊಡ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಮೂಡಲಗಿ ಬಿಇಒ ಅಜೀತ ಮನ್ನಿಕೇರಿ, ಗೋಕಾಕ ಬಿಇಒ ಜಿ.ಬಿ. ಬಳಗಾರ, ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿ ಕಾರಿ ಡಾ.ಭಾರತಿ ಕೋಣಿ, ಗೋಕಾಕ ಗ್ರಾಮೀಣ ಪಿಎಸ್‌ಐ ಖೀಲಾರಿ, ಎನ್‌ಎಸ್‌ಎಫ್‌ ಅತಿಥಿ ಗೃಹದ ನಿಂಗಪ್ಪ ಕುರಬೇಟ, ದಾಸಪ್ಪ ನಾಯಿಕ, ಲಕ್ಕಪ್ಪ ಲೋಕುರಿ, ಚನ್ನಮಲ್ಲಿಕಾರ್ಜುನ ಯಕ್ಷಂಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಕೋವಿಡ್ ಸೊಂಕಿತರ ಕಿಟ್‌ಗಳನ್ನು ಗೋಕಾಕ ಮತ್ತು ಮೂಡಲಗಿ ಸರ್ಕಾರಿ ಆಸ್ಪತ್ರೆಗಳ ಮುಖ್ಯ ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು.


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ