Breaking News

ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ

Spread the love

ಘಟಪ್ರಭಾ: ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜ್ಯೋತ್ತೇಪ್ಪ ಬಂತಿ ಹೇಳಿದರು. ಅವರು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಶ್ರೀ ಶಿವಶರಣ ಹರಳಯ್ಯ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಗೋಕಾಕ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ” ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ”ವನ್ನು ಸಸಿಗೆ ನೀರು ಉಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನ ಆರೋಗ್ಯ ಉತ್ತಮವಾಗಿರಬೇಕಾದರೆ ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಗೋಕಾಕ ತಾಲೂಕಿನ ಎನ್ ಎಸ್ ವಿ ಸರಸ್ವತಿ ಮಾದರ, ಕರವೇ ಗಜಸೇನೆ ಗೋಕಾಕ ತಾಲೂಕಾಧ್ಯಕ್ಷ ರಾಜು ನಿಲಜಗಿ, ಯುವ ಸಂಘಗಳ ಒಕ್ಕೂಟದ ತಾಲೂಕಾಧ್ಯಕ್ಷ ವಿಠ್ಠಲ ಕರೋಶಿ, ಅಕ್ಕಮಹಾದೇವಿ ಜೋಕಾನಟ್ಟಿ, ದೈಹಿಕ ಶಿಕ್ಷಕ ಮಹಾದೇವ ಕಡಕೋಳ, ಎಸ್.ಎಸ್.ದೊಡಮನಿ ಸೇರಿದಂತೆ ಯುವಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪ್ರತಿಜ್ಞೆ ವಿಧಿ ವಿಧಿಸಲಾಯಿತು. ನಂತರ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


Spread the love

About Laxminews 24x7

Check Also

ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ

Spread the loveಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ