Breaking News
Home / Uncategorized / ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

Spread the love

 

ಮೂಡಲಗಿ : ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂದೇಶ ನೀಡಿರುವ ಅವರು, ಶಿಕ್ಷಕರಿಂದ ಮಾತ್ರ ಈ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವೆಂದು ಹೇಳಿದರು.

ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ ಸರ್ವತೋಮುಖ ಏಳ್ಗೆಗಾಗಿ ಪ್ರಥಮ ಪ್ರಾಶಸ್ತ್ಯ ನೀಡಲಾಗಿದೆ. ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯವಿದ್ದು, ಶಿಕ್ಷಕ ಸಮುದಾಯ ಈ ದಿಸೆಯಲ್ಲಿ ಮಕ್ಕಳಿಗೆ ಉತ್ತಮ ಸನ್ಮಾರ್ಗವನ್ನು ತೋರಿಸುವಂತೆ ತಿಳಿಸಿದರು.

ಕೋವಿಡ್ ಕಾರಣದಿಂದಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅತೀ ಸರಳವಾಗಿ ಆಚರಿಸಲು ಸರ್ಕಾರ ನಿರ್ದೇಶನ ನೀಡಿದೆ. ಕಾರ್ಯ ನಿಮಿತ್ಯವಾಗಿ ಬೆಂಗಳೂರಿನಲ್ಲಿದ್ದು, ಸಮಸ್ತ ಶಿಕ್ಷಕ ಬಳಗಕ್ಕೆ ಶಿಕ್ಷಕರ ದಿನಾಚರಣೆಗೆ ಶುಭ ಕೋರಿದ ಅವರು, ಸೇವೆಯಿಂದ ನಿವೃತ್ತಗೊಂಡ ಶಿಕ್ಷಕರ ಜೀವನವು ಸುಖಕರದಿಂದ ಕೂಡಿರಲಿ ಎಂದು ಆಶಿಸಿದರು. ಡಾ. ರಾಧಾಕೃಷ್ಣನ್ ಭಾರತ ಕಂಡ ಅಗ್ರಗಣ್ಯ ಶಿಕ್ಷಕರಾಗಿ, ತತ್ವಜ್ಞಾನಿಯಾಗಿ ಅನನ್ಯ ಸೇವೆ ಸಲ್ಲಿಸಿದ್ದರು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗುಣಗಾನ ಮಾಡಿದರು.


Spread the love

About Laxminews 24x7

Check Also

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Spread the love ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ