Breaking News

ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಸಚಿವ ರಮೇಶ ಜಾರಕಿಹೊಳಿ ಸಂತಾಪ.

Spread the love

ನನ್ನ ಹಿರಿಯ ಸ್ನೇಹಿತ, ಗೋಕಾಕ್ ನಗರಸಭೆಯ ಸದಸ್ಯರಾಗಿದ್ದ *ಶ್ರೀಯುತ ಜನಾಬ್ ಶೇಖ್ ಫತೇವುಲ್ಲಾ ಕೋತ್ವಾಲ್* ಅವರ ಅಕಾಲಿಕ ಮರಣದಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ.

*ನನ್ನ ಬಾಲ್ಯದ ಗೆಳೆಯನಾಗಿದ್ದ ಕೋತ್ವಾಲ್*
ನನ್ನ ರಾಜಕೀಯ ಪ್ರಗತಿಯಲ್ಲಿ ಹೆಜ್ಜೆ ಹೆಜ್ಜೆಗೂ ನನ್ನೊಂದಿಗೆ ನಿಂತು ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದ್ದರು. ಗೋಕಾಕ್ ನಗರಸಭೆಗೆ ಸತತ *ಆರನೇ ಬಾರಿ ಆಯ್ಕೆ* ಯಾಗಿದ್ದರು ಮತ್ತು ನಗರಸಭೆಯ ಅಧ್ಯಕ್ಷರಾಗಿ ನಗರದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು.

ಜಾತ್ಯಾತೀತ ವ್ಯಕ್ತಿಯಾಗಿದ್ದ ಕೋತ್ವಾಲ್, ಗೋಕಾಕ್ ನಗರದ *ಅಂಜುಮನ್ ಇಸ್ಲಾಂ ಸಮಿತಿ* ಮತ್ತು *ತಂಜೀಂ ಶಿಕ್ಷಣ ಸಂಸ್ಥೆ* ಯ ಅಧ್ಯಕ್ಷರಾಗಿ, ಊರದೇವತೆಯಾದ *ಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ ಆಚರಣೆ* ಯ ಸಮಿತಿ ಸದಸ್ಯರಾಗಿ ಜಾತ್ರೆಯನ್ನು ಯಶಸ್ವಿಗೊಳಿಸುತ್ತಿದ್ದರು.

ಭಾ.ಜ.ಪ.ದ‌ ಬಗ್ಗೆ ಅಲ್ಪಸಂಖ್ಯಾತ ಸಮುದಾಯದಲ್ಲಿ ವಿಶೇಷ ಪ್ರೀತಿ ಮೂಡಿಸಿ ಮುಸ್ಲಿಂ ಸಮುದಾಯದ ಮತದಾರರು ಬಿಜೆಪಿಗೆ ಬೆಂಬಲ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದಾಗ ನನ್ನೊಂದಿಗೆ ನಿಂತು, ಜನಜಾಗೃತಿ ಮೂಡಿಸಿದ್ದ ಕೋತ್ವಾಲ್, ಅವಿರತವಾಗಿ ಕೊರೋನಾ ಹರಡುವಿಕೆಯ ವಿರುದ್ಧ ಹೋರಾಡಿದ್ದರು.

ಕೋತ್ವಾಲ್ ಅವರ ಆತ್ಮಕ್ಕೆ ಚಿರಶಾಂತಿ‌ ಸಿಗಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ, ಅವರ ಅಭಿಮಾನಿಗಳಿಗೆ ಅಗಲಿಕೆಯ ಶೋಕ‌ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಓಂ ಶಾಂತಿ:
– *ಶ್ರೀ ರಮೇಶ್ ಜಾರಕಿಹೊಳಿ‌* ಜಲಸಂಪನ್ಮೂಲ ಸಚಿವರು.


Spread the love

About Laxminews 24x7

Check Also

ಮಂಡ್ಯದಲ್ಲಿ ಮೂರು ದಿನಗಳವರೆಗೆ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಕ್ತಾಯ

Spread the loveಮಂಡ್ಯ : ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ