ಗೋಕಾಕ: ಮಳೆಯ ಆರ್ಭಟ ಮುಂದುವರಿದಿದ್ದು ಕೃಷ್ಣಾ ನದಿ ಮಟ್ಟ ಮೀರಿ ಹರಿಯುತ್ತಿದೆ. ಈ ಮಧ್ಯೆ ಶಿಂಗಳಾಪುರ ಸೇತುವೆ ಶನಿವಾರ ಮುಳುಗಡೆಯಾಗಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಸೇತುವೆ ಮೇಲಿನಿಂದ ವ್ಯಾಪಕ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು ಜನ ಸಂಚರಿಸದಂತೆ ಎಚ್ಚರಿಕೆ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಗೋಕಾಕ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.
ಸ್ಥಳಕ್ಕೆ ಗೋಕಾಕ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದ್ದು ಸುರಕ್ಷತೆ ಬಗ್ಗೆ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದ್ದಾರೆ.