Breaking News

ಗೋಕಾಕ್: ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ !

Spread the love

 

ಘಟಪ್ರಭಾ :ಚಿನ್ನದ ವ್ಯಾಪಾರಿಗಳಿಬ್ಬರು ಗೋಕಾಕದಿಂದ ಬೈಕ್ ಮೇಲೆ ಶಿಂಧಿಕುರಬೇಟ ಗ್ರಾಮಕ್ಕೆ ಬರುತ್ತಿರುವಾಗ 8 ಜನರು ಡಕಾಯಿತರ ತಂಡ ವ್ಯಾಪಾರಿಗಳನ್ನು ರಾಜ್ಯ ಹೆದ್ದಾರಿ ಮೇಲೆ ಅಡ್ಡಗಟ್ಟಿ ಹಲ್ಲೆ ಮಾಡಿ ಅರ್ಧ ಕೆ.ಜಿ ಬಂಗಾರ ಹಾಗೂ 2.80ಲಕ್ಷ ನಗದು ಹಣ ದರೋಡೆ ಮಾಡಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಬಗ್ಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಮಧ್ಯರಾತ್ರಿಯೇ ಪ್ರಕರಣ ದಾಖಲಾಗಿದ್ದು ಹಲ್ಲೆಗೊಳಗಾದ ಚಿನ್ನದ ವ್ಯಾಪಾರಿಗಳು ಘಟಪ್ರಭಾದ ಕೆಎಚ್‍ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿನ್ನದ ವ್ಯಾಪಾರಿಗಳಾದ ಸಂಜೀವ ಸದಾನಂದ ಪೋತದಾರ ಮತ್ತು ಆತನ ಸಹೋದರ ರವೀಂದ್ರ ಸದಾನಂದ ಪೋತದಾರ ಗೋಕಾಕದಲ್ಲಿರುವ ತಮ್ಮ ಅಂಗಡಿ ಬಂದ್ ಮಾಡಿ ತಮ್ಮ ಸ್ವಗ್ರಾಮ ಶಿಂಧಿಕುರಬೇಟಕ್ಕೆ ಬರುವಾಗ ರಾತ್ರಿ 8.30ರ ಸುಮಾರಿಗೆ ಘಟಪ್ರಭಾ ಸಕ್ಕರೆ ಕಾರ್ಖಾನೆ ಹತ್ತಿರವಿರುವ ಕರಿಯಮ್ಮ ದೇವರ ಗುಡಿಯ ಹತ್ತಿರ ರಾಜ್ಯ ಹೆದ್ದಾರಿ ಮೇಲೆ 4 ಬೈಕುಗಳ ಮೇಲೆ 8 ಜನ ದರೋಡೆಕಾರರು ಚಿನ್ನದ ವ್ಯಾಪಾರಿಗಳ ಬೈಕನ ಹಿಂದೆ ಮತ್ತು ಮುಂದೆ ಬಂದು ಅಡ್ಡಗಟ್ಟಿ ಅವರ ಕೈಯಲ್ಲಿರುವ ಬ್ಯಾಗನ್ನು ಕಸಿದುಕೊಂಡಿದ್ದಾರೆ ವಿರೋಧಿಸಿದಾಗ ಚಿನ್ನದ ವ್ಯಾಪಾರಿಯ ಒಬ್ಬನ ತಲೆಗೆ ಕಬ್ಬಿಣ ರಾಡಿನಿಂದ ಹಲ್ಲೆ ಮಾಡಿದ್ದಾರೆ ಮತ್ತೊಬ್ಬನ ಕಿವಿಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ