ಗೋಕಾಕ: ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲ ಕನ್ನಡಿಗರ ಮೇಲಿದೆ ಎಂದು ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಅರಿಹಂತ ಬಿರಾದಾರ ಪಾಟೀಲ ಹೇಳಿದರು.
ಅವರು, ಮಂಗಳವಾರದಂದು ಸಂಜೆ ನಗರದ ಕೆಎಲ್‍ಇ ಶಾಲೆಯ ಆವರಣದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ ಹಾಗೂ ಸಿರಿಗನ್ನಡ ಮಹಿಳಾ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾವಿರಾರು ವರ್ಷಗಳ ಇತಿಹಾಸ ಹೊಂದಿ, ಎಂಟು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡಭಾಷೆಯನ್ನು ನಾವೆಲ್ಲರೂ ಮತ್ತಷ್ಟು ಶ್ರೀಮಂತಗೊಳಿಸಬೇಕಿದೆ. ಹೆಚ್ಚಿ ಹೆಚ್ಚು ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡವನ್ನು ಇನ್ನೂ ಎತ್ತರಕ್ಕೆ ಬೆಳೆಸೋಣ ಎಂದರು.
ಇದೇ ಸಂದರ್ಭದಲ್ಲಿ ಸಾಧಕರನ್ನು ಸತ್ಕರಿಸಲಾಯಿತು. ಕಲಾವಿದರಿಂದ ಕನ್ನಡಪರ ಗೀತೆಗಳ ಸಂಗೀತ ಕಾರ್ಯಕ್ರಮ ಜರುಗಿತು.
ವೇದಿಕೆಯ ಮೇಲೆ ಅಖಿಲಭಾರತೀಯ ಸಾಹಿತ್ಯ ಪರಿಷತ ಜಿಲ್ಲಾಧ್ಯಕ್ಷ ಮಹಾಂತೇಶ ತಾಂವಶಿ, ಸಿರಿಗನ್ನಡ ಮಹಿಳಾ ವೇದಿಕೆಯ ತಾಲೂಕ ಅಧ್ಯಕ್ಷೆ ಸಂಗೀತಾ ಬನ್ನೂರ, ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಲಕ್ಷ್ಮಣ ಚೌರಿ, ಬಸವರಾಜ ಖಾನಪ್ಪನವರ, ಬಸವರಾಜ ಮುರಗೋಡ, ರಾಮಚಂದ್ರ ಕಾಕಡೆ, ವೈಶಾಲಿ ಭರಭರಿ, ಲಕ್ಷ್ಮೀ ಪಾಟೀಲ, ದೀಪಾ ಬೆನ್ನಾಡಿ, ಜಯಾನಂದ ಮಾದರ ಇದ್ದರು.