Breaking News

ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

Spread the love

ಗೋಕಾಕ್ : ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಮಹತ್ವದ ಯೋಜನೆ ರೂಪಿಸಿದ್ದು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ‘ಆರೋಗ್ಯ ಹಸ್ತ’ಕ್ಕೆ ಚಾಲನೆ ನೀಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

‘ಜನರ ಆರೋಗ್ಯ ಹಾಗೂ ದೂರದೃಷ್ಟಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಹೊಸ ಯೋಜನೆ ರೂಪಿಸಿದೆ. ಪ್ರತಿಯೊಬ್ಬರಿಗೆ ಕೋವಿಡ್ ಬಗ್ಗೆ ಇರುವ ಭಯವನ್ನು ದೂರ ಮಾಡುವುದರ ಜತೆಗೆ ಜಾಗೃತಿ ಮಾಡುವ ಕೆಲಸ ಮಾಡಲಾಗುತ್ತಿದೆ ‘ಎಂದು ತಿಳಿಸಿದರು.

‘ಈಗಾಗಲೇ ಜಿಲ್ಲೆಯಲ್ಲಿ ಚಿಕ್ಕೋಡಿ, ರಾಯಭಾಗ, ನಿಪ್ಪಾಣಿ ಸೇರಿ ರಾಜ್ಯದ 18 ಜಿಲ್ಲೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಈ ತಿಂಗಳ 30ನೇ ದಿನಾಂಕದೊಳಗೆ ಮುಗಿಯಬೇಕು’ ಎಂಬುವುದು ಪಕ್ಷದ ಸೂಚನೆಯಾಗಿದೆ.

‘ಪಕ್ಷದ ಕಾರ್ಯಕರ್ತರು ಸಹ ನಿರಂತರ ಜನರಿಗೆ ಕೋವಿಡ್ ಜಾಗೃತಿ ಜೊತೆಗೆ ಚಿಕಿತ್ಸೆಗೆ ಸಲಹೆ ನೀಡಲಿದ್ದಾರೆ. ಜನರು ಭಯ ಪಡುವ ಅವಶ್ಯಕತೆ ಇಲ್ಲ.  ಸಾರ್ವಜನಿಕರು ಸಹಕಾರ ನೀಡಬೇಕು. ಇದೊಂದು ಒಳ್ಳೆಯ ಯೋಜನೆಯಾಗಿದೆ’ ಎಂದು ಹೇಳಿದರು.

‘ನಮ್ಮ ಪಕ್ಷದಿಂದ ಮಾಡುವ ಪರೀಕ್ಷೆಗೆ ಖಾಸಗಿ ಆಸ್ಪತ್ರೆಯಲ್ಲಿ 10 ಸಾವಿರ ವೆಚ್ಚ ಮಾಡಬೇಕಾಗುತ್ತದೆ. ಬಡವರಿಗೆ ಅದು ಅಸಾಧ್ಯ. ಆದ ಕಾರಣ ಆರೋಗ್ಯ ಹಸ್ತ ಯೋಜನೆ ರೂಪಿಸಿದೆ’ ಎಂದು ಹೇಳಿದರು.

ಇನ್ನೂ ಡ್ರಗ್ಸ್ ದಂಧೆಯ ಬಗ್ಗೆ ಪ್ರತಿಕ್ರಿಯಿಸಿ, ಡ್ರಗ್ಸ್ ಜಾಲ  ದೇಶದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಇದೆ.  ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲ ಕಡೆಗಳಲ್ಲಿ ಕಾರ್ಯಾಚರಣೆ ಮಾಡಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆ

Spread the loveಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ  ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ