Breaking News
Home / new delhi / ಕನ್ನಡ ಭಾಷೆಯೇ ನಮಗೆ ಬಹುಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯೇ ನಮಗೆ ಬಹುಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Spread the love

ಗೋಕಾಕ: ಹಿಂದಿ, ಇಂಗ್ಲೀಷ ನಂತರ ಮೊದಲು ಕರ್ನಾಟಕದಲ್ಲಿ ಮೊದಲು ಕನ್ನಡಕ್ಕೆ ಆದ್ಯತೆ ನೀಡಬೇಕು, ಕನ್ನಡ ಭಾಷೆಯೇ ನಮಗೆ ಬಹುಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರದ ಹಿಲ್ ಗಾರ್ಡನ್ ತಮ್ಮ ನಿವಾಸದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ದೇಶ್ಯಾದ್ಯಂತ ಹಿಂದಿ ಹೇರಿಕೆಗೆ ನಡೆದಿತ್ತು. ಹಲವು ರಾಜ್ಯಗಳು ಇದನ್ನು ಖಂಡಿಸಿದ್ದವು. ಮೊದಲು ಪ್ರಾದೇಶಿಕ ಭಾಷೆಗೆ ಒತ್ತು ನೀಡಬೇಕು. ಇಲ್ಲಿಯವರೆಗೂ ಕನ್ನಡ ಭಾಷೆಯಲ್ಲಿ ಆಡಳಿತ ನಡೆಸಿದ್ದೇವೆ. ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಆ ನಂತರ ಆಸ್ತಕಿ ಇದ್ದವರು ತಮಗಿಷ್ಟದ ಭಾಷೆ ಕಲಿಯುತ್ತಾರೆ ಎಂದರು.

ವೈದ್ಯಕೀಯ ಸಿಬ್ಬಂದಿಗೆ ಅಗತ್ಯ ಸೌಲಭ್ಯ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಅಗತ್ಯ ಸೌಲಭ್ಯಗಳನ್ನು ವಿತರಿಸಬೇಕು. ಕೆಲವು ಸಿಬ್ಬಂದಿಗಳಿಗೆ ವೇತನವಾಗಿಲ್ಲ. ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದನೆ ಮಾಡಬೇಕು. ವೈದ್ಯಕೀಯ ಸಿಬ್ಬಂದಿಗಳಿಗೆ ವಿರೋಧ ಪಕ್ಷದ ಬೆಂಬಲ ನೀಡುತ್ತದೆ ಎಂದರು.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್

Spread the loveಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ