Breaking News

ಮಾಜಿ ಶಾಸಕ ಬಸವಂತರೆಡ್ಡಿ ನಿಧನ: ಸಂತಾಪ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ

Spread the love

 

ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರೂ, ಮಾಜಿ ಶಾಸಕರೂ ಆದ ಬಸವಂತ ರೆಡ್ಡಿ ಪಾಟೀಲ್ ಮೋತಕದಲ್ಲಿ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
1989 ಮತ್ತು 1994 ರಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಜನಾನುರಾಗಿ ಕೆಲಸಗಳನ್ನು ಮಾಡಿದ್ದ ಬಸವಂತರೆಡ್ಡಿ ಅವರು ಪ್ರಗತಿಪರ ಶಾಸಕರಾಗಿ ನಮಗೆಲ್ಲಾ ಮಾದರಿಯಾಗಿದ್ದರು ಎಂದು ಸ್ಮರಿಸುವ ಸಚಿವ ಜಾರಿಕಿಹೊಳಿ, ಯಾದಗೀರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಜನಪ್ರಿಯ ರಾಜಕಾರಣಿಯಾಗಿ ಇವರು ಹೆಸರು ಮಾಡಿದ್ದರು ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನಪರ ಕಾರ್ಯಗಳನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿಗೆ ಸೇರಿದ್ದ ಬಸವಂತರೆಡ್ಡಿ, ಕಳೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿ.ಜೆ.ಪಿ ಅಭ್ಯರ್ಥಿಗಳು ಅತಿ ಹೆಚ್ಚಿನ ಮತಗಳನ್ನು ಗಳಿಸಲು ಇವರು
ಕಾರಣಕರ್ತರಾಗಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ.
88 ವರ್ಷಗಳ ತುಂಬು ಜೀವನ ನಡೆಸಿದ್ದ ಮೃತ ಬಸವಂತ ರೆಡ್ಡಿ ಮೋತಕಪಲ್ಲಿ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ ಮತ್ತು ಬಿ.ಜೆ.ಪಿ ಕಾರ್ಯಕರ್ತರಿಗೆ ಅಗಲಿಕೆಯ ಶೋಕವನ್ನು ಭರಿಸುವ ಶಕ್ತಿ ನೀಡಲೆಂದು ಸಚಿವರು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.
ಓಂ ಶಾಂತಿಃ
ಮಾನ್ಯ ಜಲಸಂಪನ್ಮೂಲ ಸಚಿವರ
ಸಾರ್ವಜನಿಕ ಸಂಪರ್ಕಾಧಿಕಾರಿ


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ