ಗೋಕಾಕ : ‘ಮಹಾಲಿಂಗಪೂರ ಪುರಸಭೆ ಸದಸ್ಯೆ ತಳ್ಳಾಟ ಪ್ರಕರಣದಲ್ಲಿ ಶಾಸಕ ಸಿದ್ದು ಸವದಿ ಸೇರಿ 31 ಜನರ ವಿರುದ್ಧ ಕೇಸ್ ದಾಖಲು ಬಗ್ಗೆ ಪ್ರತಿಕ್ರಿಯಿಸಿ, ಈ ಹಿಂದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಹಿಂದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು. ಈ ವಿಚಾರವಾಗಿ ಕಾಂಗ್ರೆಸ್ ನಾಯಕರು ಮಹಾಲಿಂಗಪೂರದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದ್ದೇವೆ. ಯಾರೇ ತಪ್ಪು ಮಾಡಿದರು ಸಹ ಕಾನೂನು ಕ್ರಮ ಕೈಗೊಂಡರೆ ಒಳ್ಳೆಯದು, ಆದ್ರೆ ಸರ್ಕಾರ ಅಂದೇ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದರೆ, ಅವರ ಸರ್ಕಾರಕ್ಕೂ ಒಳ್ಳೆಯ ಹೆಸರು ಬರುತ್ತಿತ್ತು ಎಂದು ಹೇಳಿದರು.
ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡುವುದಕ್ಕಾಗಿ ಪ್ರವಾಸ ಕೈಗೊಳ್ಳಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಸೂಚನೆಯೂ ಸಹ ಆಗಿದೆ. ನಿನ್ನೆ ಮೈಸೂರು ವಿಭಾಗದಲ್ಲಿ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಸಂಸದರು, ಕಾರ್ಯಕರ್ತರ ಸಮಾವೇಶ ನಡೆಯಿತು. ಜ.8 ರಂದು ಬೆಂಗಳೂರಿನಲ್ಲಿದೆ. 11 ರಂದು ಹುಬ್ಬಳ್ಳಿಯಲ್ಲಿ ಇದೆ. 18 ಕಲಬುರಗಿ ಜಿಲ್ಲೆಯಲ್ಲಿ ವಿಭಾಗ ಮಟ್ಟದ ಸಮ್ಮೇಳನ ನಡೆಯಲಿದೆ. ಪಕ್ಷ ಸಂಘಟನೆಗೊಸ್ಕರ ವಿಭಾಗದ ಮಟ್ಟದ ಸಭೆಗಳನ್ನು ನಡೆಸಲಾಗುತ್ತದೆ ಎಂದರು.
ಉಪಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, ಯಾವುದೇ ರಾಷ್ಟ್ರೀಯ ನಾಯಕರು ಉಪಚುನಾವಣೆಗೆ ಬರುವುದಿಲ್ಲ. ಸ್ಥಳೀಯ ನಾಯಕರೇ ಸೇರಿಕೊಂಡು ಚುನಾವಣೆ ಎದುರಿಸಲಿದ್ದೇವೆ ಎಂದು ಸ್ಪಷ್ಟ ಪಡಿಸಿದರು.