Breaking News

ನಾಳೆಯಿಂದ ಕೋವಿಡ್ ಲಸಿಕೆ ಹಂಚಿಕೆ: ಗೋಕಾಕನಲ್ಲಿ 45 ಕೇಂದ್ರ ಆರಂಭ

Spread the love

ಗೋಕಾಕ: ನಾಳೆಯಿಂದ ತಾಲೂಕಿನಾದ್ಯಂತ ಕೋವಿಡ್ ಲಸಿಕಾ ಕೇಂದ್ರ ಆರಂಭವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ ಅಂಟಿನ ಹೇಳಿದರು.

ನಗರದಲ್ಲಿ ಇಂದು ತಾಲೂಕು ಮುಖ್ಯವೈದ್ಯಾಧಿಕಾರಿಗಳಾದ ಡಾ. ರವೀಂದ್ರ ಅಂಟಿನ, ಡಾ. ಮುತ್ತಪ್ಪ ಕೊಬ್ಬದ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ತಾಲೂಕಿನಾದ್ಯಂತ ಸುಮಾರು 45 ಕಡೆ ಕೋವಿಡ್ ಲಸಿಕಾ ಕೇಂದ್ರ ಆರಂಭಿಸಲಾಗಿದೆ. ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಸಿಬ್ಬಂದಿ ಬಳಕೆ ಮಾಡಿಕೊಂಡು ಪ್ರತಿಯೊಬ್ಬರಿಗೂ ಲಸಿಕೆ ವಿತರಿಸುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.

ಇನ್ನು ಗರ್ಭಿಣಿ ಮತ್ತು ಚಿಕ್ಕ ಮಕ್ಕಳ ಹೊರತು ಪಡಿಸಿ 18 ವರ್ಷದ ಮೇಲ್ಪಟ್ಟವರಿಗೆ ಲಸಿಕೆ ವಿತರಿಸಲಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ