Breaking News

ಗೋಕಾಕ ಹೆಸ್ಕಾಂ ಕಚೇರಿ ಮೇಲೆ ಎಸಿಬಿ ದಾಳಿ ಇಬ್ಬರು ಬಲೆ

Spread the love

 

ಹೊಲಕ್ಕೆ ಹೊಸದಾಗಿ ಟಿಸಿ ಅಳವಡಿಸಲು ರೈತನಿಂದ ರೂ.60 ಸಾವಿರ ಲಂಚ ಪಡೆಯುತ್ತಿದ್ದ ಗೋಕಾಕ ಹೆಸ್ಕಾಂ ಉಪ ವಿಭಾಗದ ಸೆಕ್ಷನ್ ಆಫೀಸರ್ ಹಾಗೂ ಸಿಬ್ಬಂದಿ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ಲೋಳಸೂರ ಸೆಕ್ಷನ್ ಆಫೀಸರ್ ಪ್ರಕಾಶ ಪರೀಟ, ಹಾಗೂ ಸಿಬ್ಬಂದಿ ಮಲ್ಲಯ್ಯ ಹಿರೇಮಠ ಅರೋಪಿಗಳಾಗಿದ್ದಾರೆ. ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಅರಭಾವಿಯ ಆನಂದ ಧರ್ಮಟ್ಟಿ ಅವರು ನೀಡಿದ ದೂರಿನ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ. ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ರೆಡ್ ಹ್ಯಾಂಡ್ ಆಗಿ ಆರೋಪಿಗಳನ್ನು ಬಲೆಗೆ ಕೆಡವಿದ್ದಾರೆ,

ಡಿವೈಎಸ್ಪಿ ವೇಣುಗೋಪಾಲ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಎ.ಎಸ್. ಗುದಿಗೊಪ್ಪ, ಸುನೀಲಕುಮಾರ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು


Spread the love

About Laxminews 24x7

Check Also

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Spread the loveಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ