Breaking News

ಗೋಕಾಕ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಗೋಕಾಕ ಆಯ್ಕೆ

Spread the love

ಗೋಕಾಕ: ಇಲ್ಲಿನ ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಕುತ್ಬುದ್ಧೀನ್ ಗೋಕಾಕ ಶನಿವಾರ ಆಯ್ಕೆಯಾಗಿದ್ದಾರೆ.

ಕುತ್ಬುದ್ಧೀನ್ ಅವರು ಮೂರು ಬಾರಿ ನಗರಸಭೆಗೆ ಆಯ್ಕೆಯಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮುಖಂಡರಾದ ಲಖನ್ ಜಾರಕಿಹೊಳಿ ಹಾಗೂ ಅಂಬಿರಾವ್ ಪಾಟೀಲ ಅವರ ಸೂಚನೆಯ ಮೇರೆಗೆ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಂಚ್ಯಾಳ, ನಗರ ಸೇವಕರಾದ ಅಬ್ಬಾಸ ದೇಸಾಯಿ, ಸಂತೋಷ ಮಂತ್ರಣ್ಣವರ, ಬಸವರಾಜ ದೇಶನೂರ ಸೇರಿದಂತೆ ನಗರಸಭೆಯ ಎಲ್ಲ ಸದಸ್ಯರು ಇದ್ದರು.

ನೂತನ ಅಧ್ಯಕ್ಷ ಕುತ್ಬುದ್ಧೀನ್ ಮಾತನಾಡಿ, “ನನ್ನ ಅವಿರೋಧ ಆಯ್ಕೆಗೆ ಶ್ರಮಿಸಿದ ಸಚಿವ ರಮೇಶ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮುಖಂಡರಾದ ಲಖನ್ ಜಾರಕಿಹೊಳಿ, ಅಂಬಿರಾವ್ ಪಾಟೀಲ ಹಾಗೂ ನಗರಸಭೆಯ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ