ಗೋಕಾಕ: ವ್ಯಕ್ತಿಯೊಬ್ಬರಿಗೆ ಹೆಚ್ಚಿನ ಲಾಭದ ಆಮಿಷ ತೋರಿಸಿ ವಾಹನ ಹಾಗೂ ಹಣವನ್ನು ಲಪಟಾಯಿಸಿಕೊಂಡು ಪರಾರಿಯಾಗುತ್ತಿದ ಖದೀಮನನ್ನು ಗೋಕಾಕ ಪೊಲೀಸರು ಸೆರೆಹಿಡಿದಿದ್ದಾರೆ.
ನಂಬಿಕೆ ದ್ರೋಹ ಮಾಡಿ ಬುಲೆರೋ ವಾಹನ ಹಾಗೂ 2 ಲಕ್ಷ ರೂಪಾಯಿ ಪಡೆದುಕೊಂಡು ಪರಾರಿಯಾಗುತ್ತಿದ್ದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ತಾಂಡಾದ ಶಿವಾನಂದ (ರಾಜು) ಪ್ರೇಮಸಿಂಗ ಚವ್ಹಾಣ ಎಂಬ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ.
ಗೋಕಾಕ ಶಹರ್ ಪೊಲೀಸ್ ಠಾಣೆಯ ಡಿಎಸ್ಪಿ ಜಾವೀದ್ ಇನಾಮದಾರ ರವರ ಮಾರ್ಗದರ್ಶನದಲ್ಲಿ ಠಾಣೆಯ ಪಿಎಸ್ಐ ಕೆ.ಬಿ. ವಾಲಿಕಾರ, ಎ.ಟಿ. ಅಮ್ಮಿನಬಾವಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಗೋಕಾಕ ಬಿಗ್ ಬ್ರೇಕಿಂಗ್ ನ್ಯೂಸ್
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576*
*Laxmi News*
Laxmi News 24×7