Breaking News

ದೆಹಲಿ ಹಿಂಸಾಚಾರ: ನ್ಯಾಯಾಂಗ ತನಿಖೆಗೆ ಪೂಜಾರಿ ಒತ್ತಾಯ

Spread the love

ಗೋಕಾಕ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗಳಿಗೆ ರಾಜಕೀಯದ ಬಣ್ಣಕೊಡುತ್ತಿರುವುದು ದುರ್ದೈವದ ಸಂಗತಿ ಎಂದು ಜೆ‌ಡಿಎಸ್ ಮುಖಂಡ ಅಶೋಕ ಪೂಜಾರಿ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಯಾವುದೇ ಪ್ರತಿಭಟನೆಗಳಲ್ಲಿ ನಡೆಯುವ ಹಿಂಸಾಕೃತ್ಯಗಳು ಅಕ್ಷಮ್ಯ ಮತ್ತು ಖಂಡನೀಯ. ದೆಹಲಿಯಲ್ಲಿ ಜ.26 ರಂದು ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಕಾಣದ ಕೈಗಳು ದುಷ್ಕೃತ್ಯ ನಡೆಸಿವೆ ಎಂಬ ಅನುಮಾನ ಕಂಡುಬರುತ್ತಿದೆ. ಹೀಗಾಗಿ, ಕೇಂದ್ರ ಸರ್ಕಾರ ಈ ಬಗ್ಗೆ ಉನ್ನತಮಟ್ಟದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಮಸೂದೆ ವಿರುದ್ಧದ ಹೋರಾಟಗಳನ್ನು ಹತ್ತಿಕ್ಕಲು ಪ್ರಯತ್ನಿಸಿದಷ್ಟು ಹೋರಾಟ ಪ್ರಬಲವಾಗುತ್ತಿದೆ. ಹೀಗಾಗಿ, ಸರ್ಕಾರ ತಡಮಾಡದೇ ರೈತರನ್ನು ಮಾತುಕತೆಗೆ ಆಹ್ವಾನಿಸಬೇಕು ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ