Breaking News
Home / ಜಿಲ್ಲೆ / ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ : ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ಇದರಿಂದ ತಳಮಟ್ಟದಿಂದ ಪಕ್ಷ ಸಂಘಟಿಸಲು ಗ್ರಾಮ ಪಂಚಾಯತಿ ಚುನಾವಣೆ ಉತ್ತಮ ಅಡಿಪಾಯ ಎಂದು ಹೇಳಿದರು.

ಮುಂಬರುವ ಲೋಕಸಭಾ ಮತ್ತು ತಾಪಂ-ಜಿಪಂ ಚುನಾವಣೆಗಳಲ್ಲೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು. ಈಗಿನಿಂದಲೇ ಸನ್ನದ್ಧರಾಗಿ ದುಡಿಯಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ ಬಳಿ ಮುಂದಿಟ್ಟು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಅವರು ತಿಳಿಸಿದರು.
ಗ್ರಾಮದ ಅಭಿವೃದ್ಧಿಗಾಗಿ ನೂತನ ಗ್ರಾಪಂ ಸದಸ್ಯರುಗಳು ಶ್ರಮಿಸಬೇಕು. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರಗತಿಪರ ಕಾರ್ಯಗಳಲ್ಲಿ ಎಂದಿಗೂ ಬೇಧಭಾವ ಮಾಡಬಾರದು. ಒಗ್ಗಟ್ಟಿನಿಂದ ದುಡಿದು ಜನರು ತಮ್ಮ ಮೇಲಿಟ್ಟಿರುವ ಪ್ರೀತಿ-ವಿಶ್ವಾಸವನ್ನು ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಹಿರಿಯರನ್ನು ಗಣನೆಗೆ ತೆಗೆದುಕೊಂಡು ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ದುಡಿಯುವಂತೆ ಅವರು ತಿಳಿಸಿದರು.
ಮಾರ್ಚ ತಿಂಗಳಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಈ ಬಾರಿಯೂ ಬಿಜೆಪಿ ಅಭ್ಯರ್ಥಿ ದಾಖಲೆ ಮತಗಳಿಂದ ಆಯ್ಕೆ ಮಾಡಲು ಕಾರ್ಯಕರ್ತರು ಸನ್ನದ್ಧರಾಗಬೇಕು. ಪ್ರತಿ ಮನೆ-ಮನೆಗಳಿಗೆ ಕಾರ್ಯಕರ್ತರು ಭೇಟಿ ನೀಡಿ ಪಕ್ಷದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬೇಕು. ದೇಶದ ಎಲ್ಲೆಡೆ ಕಮಲ ಅರಳಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮತ್ತೇ ಕಮಲ ಅರಳಲಿದೆ. ಕೇಂದ್ರ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲು ಬಿಜೆಪಿ ಅಭ್ಯರ್ಥಿಗೆ ಆಶೀರ್ವಾದ ಮಾಡುವಂತೆ ನೂತನ ಚುನಾಯಿತ ಪ್ರತಿನಿಧಿಗಳಲ್ಲಿ ಅವರು ಮನವಿ ಮಾಡಿದರು.
ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ, ಪ್ರಭಾಶುಗರ ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ, ಪರ್ವತಗೌಡ ಪಾಟೀಲ, ಎಂ.ಎಂ. ಪಾಟೀಲ, ಅಜ್ಜಪ್ಪ ಗಿರಡ್ಡಿ, ಬಸವಂತ ಕಮತಿ, ಮುತ್ತೆಪ್ಪ ಕುಳ್ಳೂರ, ಅಡಿವೆಪ್ಪ ಹಾದಿಮನಿ, ರವಿ ಪರುಶೆಟ್ಟಿ, ಮಲಕಾರಿ ವಡೇರ, ಬಸವಂತ ಕೋಣಿ, ವಾಯ್.ಆರ್. ಪಾಟೀಲ, ಅಶೋಕ ಖಂಡ್ರಟ್ಟಿ, ಶಿದ್ಲಿಂಗ ಕಂಬಳಿ, ಕೃಷ್ಣಪ್ಪ ಬಂಡ್ರೊಳ್ಳಿ, ಗಿರೀಶ ಹಳ್ಳೂರ, ಈರಣ್ಣಾ ಜಾಲಿಬೇರಿ, ಲಕ್ಷ್ಮಣ ಗಣಪ್ಪಗೋಳ, ಶಿವಲಿಂಗ ಪೂಜೇರಿ, ಸುಭಾಷ ವಂಟಗೋಡಿ, ಮಹಾದೇವ ನಾಡಗೌಡ, ಮುತ್ತೇನಗೌಡ ಪಾಟೀಲ, ಚಂದ್ರಶೇಖರ ನಾಯಿಕ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಅರಭಾವಿ ಕ್ಷೇತ್ರದ 33 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷರುಗಳು ಸತ್ಕರಿಸಿ ಕೃತಜ್ಞತೆ ಸಲ್ಲಿಸಿದರು.


Spread the love

About Laxminews 24x7

Check Also

ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ವರ್ಷದ ಮೊದಲ ಮಳೆ

Spread the love ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಮತ್ತು ಮಧ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ