Breaking News
????????????????????????????????????

ಗೋಕಾಕ: ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡುತ್ತಿರುವುದು.

Spread the love

ಗೋಕಾಕ: ಕೊವಿಡ್-19ರ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಹೊಸ ನಿರ್ದೇಶನಗಳ ಮೇರೆಗೆ ಬರುವ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವದೆಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು.

ಶನಿವಾರದಂದು ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕೋರೋನಾ ಹಿನ್ನೆಲೆಯಲ್ಲಿ ವಿವಿಧ ಸಾಸಂಸ್ಕøತಿಕ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದ್ದು, 10 ವರ್ಷದೊಳಗಿನ ಮಕ್ಕಳಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ವಾಲ್ಮೀಕಿ ಕ್ರೀಡಾಂಗಣದಲ್ಲಿ ಆಚರಿಸುವ ಸ್ವಾತ್ರಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿಷೇಧ ಹೇರಲಾಗಿದೆ ಎಂದು ತಿಳಿಸಿದರು.

ನಗರದ ಆಯ್ದ ಶಾಲೆಗಳ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸರ್ಕಾರಿ ನೌಕರರು ನೇತ್ರತ್ವದಲ್ಲಿ ಪ್ರಭಾತಪೇರಿಯನ್ನು ನಡೆಸಲಾಗುವುದು. ಮೊದಲಿಗೆ ಮಿನಿ ವಿಧಾನ ಸೌಧದ ಮುಂದೆ ಧ್ವಜಾರೋಹಣವನ್ನು ನಡೆಸಿ, ಪ್ರಭಾತ ಪೇರಿ ಮುಖಾಂತರ ನಗರದ ವಿವಿಧೆಡೆ ಸಂಚರಿಸಿ ಧ್ವಜಾರೋಣ ನಡೆಸಿ ನಂತರ ವಾಲ್ಮೀಕಿ ಕ್ರೀಡಾಂಗಣದಲ್ಲಿ ಧ್ವಜಾರೋಣವನ್ನು ನಡೆಸಲಾಗುವುದು ಎಂದು ತಿಳಿಸಿದರು.

ಸ್ವಾತ್ರಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಪಾಡಲು ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲದಾರ ಎಲ್.ಎಚ್.ಭೋವಿ, ಪೌರಾಯುಕ್ತ ಶಿವಾನಂದ ಹಿರೇಮಠ, ತಾಲೂಕಾ ಆರೋಗ್ಯಾಧಿಕಾರಿ ಡಾ. ಎಮ್.ಎಸ್.ಕೊಪ್ಪದ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಸಹಾಯಕ ಕೃಷಿ ನಿರ್ದೇಶಕ ಎಮ್.ಎಮ್.ನದಾಫ, ವಲಯ ಅರಣ್ಯಾಧಿಕಾರಿ ಕೆ.ಎನ್.ವಣ್ಣೂರ, ಸಮಾಜ ಕಲ್ಯಾಣಾಧಿಕಾರಿ ಎಸ್.ವಿ.ಕಲ್ಲಪ್ಪನವರ, ಹೆಸ್ಕಾಂ ಅಧಿಕಾರಿ ಎಸ್.ಪಿ. ವರಾಳೆ, ಪಿಎಸ್‍ಐ ಕೆ.ಬಿ.ವಾಲಿಕಾರ ಮಲ್ಲಿಕಾರ್ಜುನ ಮಾಸನ್ನವರ ಸೇರಿದಂತೆ ಅನೇಕರು ಇದ್ದರು.

 

 


Spread the love

About Laxminews 24x7

Check Also

ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಪರಮೇಶ್ವರ್​

Spread the love ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಪರಮೇಶ್ವರ್​ ರಾಜ್ಯದ ಪೊಲೀಸ್ ಅಧಿಕಾರಿಗಳು ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ