Breaking News

ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರು ರಮೇಶ ಜಾರಕಿಹೊಳಿ ಹೇಳಿದರು.

Spread the love

ಗೋಕಾಕ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿಗೆ ನೀಡಲಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು.

‘ಸಕಾಲದಲ್ಲಿ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಯಂತ್ರೋಪಕರಣಗಳನ್ನು ನೀಡಲಾಗುತ್ತಿದ್ದು ರೈತರು ಸದ್ಬಳಕೆ ಮಾಡಿಕೊಂಡು, ಆರ್ಥಿಕ ಪ್ರಗತಿ ಸಾಧಿಸಬೇಕು’ ಎಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ, ‘ಹಿಂಗಾರು ಹಂಗಾಮಿಗೆ ಬೇಕಾಗುವ ಜೋಳ, ಕಡಲೆ, ಗೋಧಿ, ಸೂರ್ಯಕಾಂತಿ ಬೀಜಗಳನ್ನು ದಾಸ್ತಾನು ಮಾಡಲಾಗಿದೆ.

ರೈತ ಸಂಪರ್ಕ ಕೇಂದ್ರಗಳಾದ ಗೋಕಾಕ, ಅರಭಾಂವಿ, ಕೌಜಲಗಿ, ಉಪ ಮಾರಾಟ ಕೇಂದ್ರಗಳಾದ ಖನಗಾಂವ, ಅಂಕಲಗಿ, ಮೂಡಲಗಿ, ಯಾದವಾಡದಲ್ಲಿ ರಿಯಾಯತಿ ದರದಲ್ಲಿ ಪಡೆಯಬಹುದು’ ಎಂದು ಕೋರಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ತುಕಾರಾಮ ಕಾಗಲ ಮತ್ತು ಮಡ್ಡೆಪ್ಪ ತೋಳಿನವರ ಇದ್ದರು.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ