Breaking News

ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ’ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

Spread the love

ಗೋಕಾಕ: ‘ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಸಂಬಂಧಿತ ತಿದ್ದುಪಡಿ ಮಸೂದೆಗಳಿಂದ ಕೃಷಿ ಭೂಮಿ ಖರೀದಿಗೆ ಹೆಚ್ಚಿನ ಅವಕಾಶವಿದೆ. ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ’ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದಿಂದ ಹೊರವಲಯದ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೃಷಿ ಉತ್ಪನ್ನಗಳು, ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ರೈತರ ಬೆಲೆ ಭರವಸೆ ಮತ್ತು ಸೇವಾ ಒಪ್ಪಂದ ಮಸೂದೆ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಮಸೂದೆಗಳನ್ನು ಕೇಂದ್ರ ಸರ್ಕಾರ ರೈತರ ಅನುಕೂಲಕ್ಕಾಗಿ ಮಾಡಿದೆ. ಕೃಷಿಯೇತರ ಭೂಮಿ ಖರೀದಿಸಲು ಅವಕಾಶ, ಹೈನೋದ್ಯಮ, ಕುರಿ, ಮೇಕೆ, ಕೋಳಿ ಸಾಕಾಣಿಕೆಯಂತಹ ಉಪ ಕಸಬುಗಳಲ್ಲಿ ಯುವಕರು ತೊಡಗಿಸಿಕೊಳ್ಳಲು ಅವಕಾಶವಿದೆ.

ಪ್ರತಿ ವರ್ಷ ಕೃಷಿ ವಿಶ್ವವಿದ್ಯಾಲಯದಿಂದ ಹೊರಬರುವ ನಾಲ್ಕು ಸಾವಿರ ಪದವೀಧರರಿಗೆ ಕೃಷಿ ಭೂಮಿ ಖರೀದಿಸಿ ಕೃಷಿಯಲ್ಲಿ ತೊಡಗಿಸಿಕೊಳ್ಳಲೂ ಅವಕಾಶವಿದೆ. ಕೃಷಿಕರಿಗೆ ವರದಾನವಾಗಿವೆ’ ಎಂದರು.

ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ, ಒಬಿಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಮಾಳೇದವರ, ರೈತ ಮೋರ್ಚಾ ಕಾರ್ಯದರ್ಶಿ ಆನಂದ ಮೂಡಲಗಿ ಇದ್ದರು.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ