Breaking News

ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತೋತ್ಸವ ಆಚರಿಸಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ

Spread the love

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶುಕ್ರವಾರ ವೀರರಾಣಿ ಕಿತ್ತೂರು ಚೆನ್ನಮ್ಮ ದಿನಾಚರಣೆ ಆಚರಿಸಿದರು.

ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರಕ್ಕೆ ರಾಹುಲ್, ಪ್ರಿಯಾಂಕಾ ಅವರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬ್ರಿಟಿಷರ ವಿರುದ್ದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ರಾಣಿ ಚೆನ್ನಮ್ಮ, ಅವರ ಆದರ್ಶ ಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಆಧುನಿಕ ಕಾಲದಲ್ಲಿ ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಚನ್ನಮ್ಮಳಂತೆ ಬೆಳೆಸಬೇಕು ಎಂದು ಮನವಿ ಮಾಡಿದರು.

 

ಈ ಸಂದರ್ಭದಲ್ಲಿ ವಿವೇಕ ಜತ್ತಿ, ಬಸವರಾಜ ಜತ್ತಿ, ಪಾಂಡುರಂಗ ಸುಭೆ, ಅರವಿಂದ ಕಾರ್ಜಿ, ಇಮರಾನ್ ತಪಕೀರ್, ಸಿದ್ದಿಕಿ, ಪಾಂಡು ಮನ್ನಿಕೇರಿ, ಮಾರುತಿ ಪುಟಗುದ್ದಿ ಸೇರಿದಂತೆ ಮುಂತಾದವರು ಇದ್ದರು.


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ