https://youtu.be/klKiPyqipLk
ಗೋಕಾಕ : ರೈತರು ಭಾರತ್ ಬಂದ್ ಗೆ ಕರೆ ನೀಡಿದ ಹಿನ್ನೆಲೆ ರಾಜ್ಯಾದ್ಯಂತ ಪ್ರತಿಭಟನೆ ಕಾವು ಹೆಚ್ಚಾಗಿದೆ. ಆದರೆ ಗೋಕಾಕ ತಾಲ್ಲೂಕಿನಲ್ಲಿ ಪ್ರತಿಭಟನೆ ಬಿಸಿ ತಟ್ಟಿಲ್ಲ. ಎಂದಿನಂತೆ ಜನಜೀವನ ಸಹಜ ಸ್ಥಿತಿಯಲ್ಲಿದೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುವಂತೆ ಆಗ್ರಹಿಸಿ ಭಾರತ್ ಬಂದ್ ಕರೆ ನೀಡಲಾಗಿದೆ. ಆದರೆ ಜನರು ದಿನನಿತ್ಯದಂತೆ ಅಂಗಡಿ, ವ್ಯಾಪಾರ ವಹಿವಾಟು ನಡೆಸಿರುವುದು ಕಂಡು ಬಂದಿದೆ. ಇನ್ನೂ ಕೆಎಸ್ ಆರ್ ಟಿಸಿ ಹಾಗೂ ಖಾಸಗಿ ವಾಹನಗಳು ರಸ್ತೆಗಳಿದ್ದು, ಸೇವೆಗೆ ಸಿದ್ದವಾಗಿವೆ.
ಅಂಗಡಿ ಮಾಲೀಕರು, ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ. ಬಸ್ ಗಳ ಸೇವೆ ನೀಡಲು ಸಿದ್ದವಾಗಿದ್ದರು. ಜನರು ಮಾತ್ರ ಬಂದಿಲ್ಲ. ಇದರಿಂದ ಬಸ್ ನಿಲ್ದಾಣಗಳು ನಿಂತಿವೆ. ಮುಂಜಾಗ್ರತ ಕ್ರಮವಾಗಿ ತಾಲ್ಲೂಕಿನಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ.
Laxmi News 24×7