ಗೋಕಾಕ: ಜನತೆ ಸ್ವಪ್ರೇರಣೆಯಿಂದ ಕೋವಿಡ್ ಲಸಿಕೆ ಪಡೆದು ಮಹಾಮಾರಿ ಕೋರೋನಾದಿಂದ ರಕ್ಷಣೆ ಪಡೆಯುವಂತೆ ಕೆಎಲ್‍ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು.
ಬುಧವಾರದಂದು ನಗರದ ಮುಪ್ಪಯ್ಯನಮಠದಲ್ಲಿ ವಾರ್ಡ ನಂ 29ರಲ್ಲಿಯ ಜನತೆಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಲಸಿಕೆ ಚುಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಕೋವಿಡ್ ಮಹಾಮಾರಿ ಹೆಚ್ಚಾಗುತ್ತಿದೆ. ಜನತೆ ಜಾಗೃತರಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಎಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೋರೋನಾ 2ನೇ ಅಲೆಯನ್ನು ಹಿಮ್ಮೇಟ್ಟಿಸಲು ಸಹಕರಿಸಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯೆ ಲಕ್ಷ್ಮೀ ದೇಶನೂರ, ಮುಖಂಡರಾದ ಬಸವರಾಜ ದೇಶನೂರ, ಧರೀಶ ಕಲಘಾಣ, ದೇವಾನಂದ ಕಂಬಾರ, ಬಸವರಾಜ ಕ್ಯಾಸ್ತಿ, ಬಸವರಾಜ ಶೇಗುಣಶಿ ಸೇರಿದಂತೆ ಅನೇಕರು ಇದ್ದರು.
Laxmi News 24×7