Breaking News

ಗೋಕಾಕ:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥಾ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್

Spread the love

ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು.

 

ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ ವೃತ್ತದ ಮಾರ್ಗವಾಗಿ ಬಸವೇಶ್ವರ ವೃತ್ತದಲ್ಲಿ ಮುಕ್ತಾಯವಾಯಿತು.

ಜಾಥಾ ಉದ್ದಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು. ಕೂಡಲೇ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೇ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಕಾಂಗ್ರೆಸ್ ಕಾರ್ಯಕರ್ತರಷ್ಟೇ ಅಲ್ಲದೇ ಪ್ರಿಯಾಂಕಾ ಹಾಗೂ ರಾಹುಲ್ ಅವರ ಅಭಿಮಾನಿಗಳು, ಸಾರ್ವಜನಿಕರು ಕೂಡ ಜಾಥಾದಲ್ಲಿ ಪಾಲ್ಗೊಂಡಿದ್ದರು.

 

 

 

ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಪ್ರಿಯಾಂಕಾ ಹಾಗೂ ರಾಹುಲ್ ಅವರು, ಕೆಪಿಸಿಸಿ ಆದೇಶದ ಮೇರೆಗೆ ಇಂದು ಗೋಕಾಕನಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಪ್ರತಿಭಟನೆಯ ಕೇಂದ್ರ ಬಿಂದುವಾಗಿ ಪಕ್ಷ ಮತ್ತು ಕಾರ್ಯಕರ್ತರನ್ನು ಸಂಘಟಿಸುವಲ್ಲಿ ಯಶಸ್ವಿಯಾದರು.

 

ಮುಖಂಡರಾದ ವಿವೇಕ ಜತ್ತಿ, ರಾಹುಲ್ ಬಡೆಸಗೋಳ, ರೆಹಮಾನ್ ಮೊಕಾಶಿ, ಪ್ರವೀಣ ಗುಡ್ಡಾಕಾಯಿ, ಬಸವರಾಜ ಸಾಯಣ್ಣವರ, ಸುನೀಲ ಅಂಕದವರ, ಕಮಲಾ ಕರೆನ್ನವರ್, ಯಶೋಧಾ ಬಿರಡಿ, ಶಿವು ಕಿಲಾರಿ, ಬಸವಣ್ಣೆಪ್ಪ ಪರುಶೆಟ್ಟಿ, ಇಮ್ರಾನ್ ತಪಕೀರ್, ರಾಜು ಮೇದಾರ, ಪ್ರಕಾಶ ಬಸಾಪುರೆ, ಮಾರುತಿ ಗುಟಗುದ್ದಿ, ಜುಬೇರ್ ಮಿರ್ಜಾನಾಯ್ಕ್ ಸೇರಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.


Spread the love

About Laxminews 24x7

Check Also

ಇದು ಆಸ್ಪತ್ರೆಯೋ…ತ್ಯಾಜ್ಯ ವಿಲೇವಾರಿ ಘಟಕವೋ???

Spread the love ಅವ್ಯವಸ್ಥೆಯ ಆಗರವಾದ ಜಮಖಂಡಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಯ ಆಗರವಾದ ಜಮಖಂಡಿ ಸರ್ಕಾರಿ ಆಸ್ಪತ್ರೆ ಬಾಗಲಕೋಟೆ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ