Breaking News
Home / ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನ. 26 ರಂದು ಗೋಕಾಕದಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನ. 26 ರಂದು ಗೋಕಾಕದಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ : ‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಸಲ್ಲುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

 

 


ಗುರುವಾರದಂದು ಅರಭಾವಿ ಮಂಡಲ ಭಾರತೀಯ ಜನತಾ ಪಾರ್ಟಿ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಹಮ್ಮಿಕೊಂಡಿದ್ದ ‘ಸಂವಿಧಾನ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ನಾಗರೀಕರಿಗೂ ಸಮಾನ ಹಕ್ಕನ್ನು ಒದಗಿಸುವ ಪ್ರಮುಖ ಸಾಧನ ಸಂವಿಧಾನ ಎಂದು ಹೇಳಿದರು.
ಎಲ್ಲ ವರ್ಗಗಳ ಸ್ವಾತಂತ್ರ್ಯವನ್ನು ರಕ್ಷಿಸುವ ಮತ್ತು ಜಾತಿ, ಮತ, ಪಂಥ, ಪ್ರದೇಶ ಮತ್ತು ಭಾಷೆಯ ಆಧಾರದ ಮೇಲೆ ಯಾವುದೇ ತಾರತಮ್ಯ ಮಾಡದೇ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಸಿಗಬೇಕೆಂಬುದು ಡಾ.ಅಂಬೇಡ್ಕರ ಅವರ ಆಶಯವಾಗಿತ್ತು. ಅದರಂತೆ ಪ್ರತಿಯೊಬ್ಬರೂ ಅಂಬೇಡ್ಕರ ಅವರನ್ನು ಸ್ಮರಿಸಿ ಅವರಿಗೆ ಗೌರವ ಆದರ ನೀಡಬೇಕೆಂದು ತಿಳಿಸಿದರು.
ನಮಗೆ ಮೊದಲು ದೇಶ ಮುಖ್ಯ. ದೇಶದ ಒಳತಿಗಾಗಿ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಬೇಕು. ಜೊತೆಗೆ ದೇಶಾಭಿಮಾನವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಭಾರತೀಯ ಜನತಾ ಪಾರ್ಟಿ ತನ್ನ ಮೂಲ ಸಂಘಟನೆ ಮೂಲಕ ಅಸಂಖ್ಯೆ ಕಾರ್ಯಕರ್ತರ ಪಡೆಯನ್ನು ರಚಿಸಿಕೊಂಡು ಸತತ ಎರಡನೇ ಅವಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ದೇಶದ ಉದ್ದಗಲಕ್ಕೂ ಇಂದು ಬಿಜೆಪಿ ತನ್ನ ಅಧಿಕಾರವನ್ನು ವಿಸ್ತರಿಸಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ನಾಯಕತ್ವ ಮತ್ತು ಪಾರದರ್ಶಕ ಆಡಳಿತವೇ ಕಾರಣವಾಗಿದೆ. ಇಡೀ ವಿಶ್ವವೇ ಇಂದು ಭಾರತದತ್ತ ನೋಡಲು ಮೋದಿ ಅವರು ಹಮ್ಮಿಕೊಂಡ ಪ್ರಗತಿಪರ ಕಾರ್ಯಗಳೇ ಕಾರಣವೆಂದು ಹೇಳಿದರು.
ಭಾರತದ ಪ್ರತಿಯೊಬ್ಬ ಪ್ರಜೆಯೂ ದೇಶವನ್ನು ಪ್ರಗತಿಪಥದತ್ತ ಕೊಂಡೊಯ್ಯಲು ಹೆಚ್ಚಿನ ಕೊಡುಗೆ ನೀಡುವುದಾಗಬೇಕು. ನವ ಭಾರತ ನಿರ್ಮಾಣದ ಗುರಿಯಾಗಿರಬೇಕು. ಜೊತೆಗೆ ಆತ್ಮ ನಿರ್ಭರ ಭಾರತದ ಗುರಿಯಾಗಲು ನಾವೆಲ್ಲರೂ ಪಣ ತೊಡಬೇಕಾದ ಅಗತ್ಯವಿದೆ. ಭ್ರಾತೃತ್ವದ ಮತ್ತು ಸಾಮರಸ್ಯದ ಆಧಾರದಲ್ಲಿ ಏಕ್ ಭಾರತ್, ಶ್ರೇಷ್ಠ ಭಾರತ್ ನಿರ್ಮಿಸುವ ದಿಕ್ಕಿನಲ್ಲಿ ರಾಷ್ಟ್ರವನ್ನು ಸಮರ್ಥ ರೀತಿಯಲ್ಲಿ ಕೊಂಡೊಯ್ಯಲು ನಾವು ಪಣ ತೊಟ್ಟು ರಾಷ್ಟ್ರದ ಸಮಗ್ರ ಪ್ರಗತಿಗೆ ಆದ್ಯತೆ ನೀಡುವುದಾಗಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಇದೇ ಸಂದರ್ಭದಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಭಾರತಾಂಬೆ, ವಿಶ್ವರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚಣೆ ಮಾಡಿದರು.
ಅಧ್ಯಕ್ಷತೆಯನ್ನು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು.
ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಜಿಲ್ಲಾ ಸಹಕಾರ ಪ್ರಕೋಷ್ಠದ ಪ್ರಮುಖ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ, ಎಸ್‍ಟಿ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣಾ ದೇವರ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಕ್ಬಾಲ್ ಸರ್ಕಾವಸ್, ಓಬಿಸಿ ಮೋರ್ಚಾ ಅಧ್ಯಕ್ಷ ಸಂಗಪ್ಪ ಕಂಠಿಕಾರ, ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
ಉಪನ್ಯಾಸಕ ವಿಠ್ಠಲ ಕನೀಲ್ದಾರ ಸಂವಿಧಾನದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಪರಸಪ್ಪ ಬಬಲಿ ಸ್ವಾಗತಿಸಿದರು. ಇನ್ನೋರ್ವ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ವಂದಿಸಿದರು.
ಫೋಟೋ ಕ್ಯಾಪ್ಷನ್ : ಗೋಕಾಕ 1 : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗುರುವಾರದಂದು ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಮಂಡಲ ಬಿಜೆಪಿ ಹಮ್ಮಿಕೊಂಡಿದ್ದ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗೋಕಾಕ 2 : ಸಂವಿಧಾನ ದಿನ ಕಾರ್ಯಕ್ರಮದ ನಿಮಿತ್ಯ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.


Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ