Breaking News

ಹಳೆಯ ದ್ವೇಷದ ಹಿನ್ನಲೆ ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ.

Spread the love

ಗೋಕಾಕ್: ಹಳೆಯ ದ್ವೇಷದ ಹಿನ್ನಲೆ ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ.

ಗೋಕಾಕ ಪಟ್ಟಣದ ಆದಿ ಜಾಂಬವ ನಗರದ ನಿವಾಸಿ ಸಿದ್ದು ಅರ್ಜುನ ಕಣಮಡ್ಡಿ (27) ಕೊಲೆಯಾದ ಯುವಕ. ಬುಧವಾರ ರಾತ್ರಿ ಮೂವರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದು ಕೊಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆಗೊಳಗಾದ ಯುವಕನನ್ನು ಗೋಕಾಕ ಆಸ್ಪತ್ರೆಯಲ್ಲಿ ದಾಖಲಿಸಿ ಬಳಿಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ತಂದು ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ.‌ ಈ ಕುರಿತು ಗೋಕಾಕ ನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಹಂತಕರ‌ ಶೋಧ ಕಾರ್ಯ ಆರಂಭವಾಗಿದ್ದು, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ