Breaking News

ಪಿಡಿಒ ದಂಪತಿ ಮನೆಯಲ್ಲಿ 1.42 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ‌

Spread the love

ಶಿವಮೊಗ್ಗ: ಇಲ್ಲಿನ  ವಿದ್ಯಾನಗರದಲ್ಲಿ ವಾಸವಾಗಿದ್ದ ಪಿಡಿಒ ದಂಪತಿ ಮನೆಯಲ್ಲಿ 1.42 ಕೋಟಿ ರೂ. ಮೌಲ್ಯದ ಚಿನ್ನಾಭರಣ  ಕಳ್ಳತನವಾಗಿದೆ.

ವಿದ್ಯಾನಗರದ 4ಎ ಕ್ರಾಸ್‌ನಲ್ಲಿ ಬಾಡಿಗೆ ಮನೆಯಲ್ಲಿ ಪಿಡಿಒ ದಂಪತಿ ವಾಸವಾಗಿದ್ದರು. ಎಂದಿನಂತೆ ದಂಪತಿ ಕರ್ತವ್ಯಕ್ಕೆ ತೆರಳಿದ್ದಾಗ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. ಮನೆ ಬೀಗ ಮುರಿದು, ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ಮನೆ ಕಳ್ಳತನ ಹಾಗೂ ಕಳ್ಳ ಪರಾರಿಯಾದ ದೃಶ್ಯ ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕೇವಲ 30 ನಿಮಿಷದಲ್ಲಿ 943 ಗ್ರಾಂ ಚಿನ್ನಾಭರಣ, 500 ಗ್ರಾಂ ಬೆಳ್ಳಿ, 1.5 ಲಕ್ಷ ರೂ. ಮೌಲ್ಯದ 15 ವಾಚ್‌ಗಳು ಹಾಗೂ 86,000 ರೂ. ನಗದು ಹಣ ಸೇರಿದಂತೆ 1,42,29,500 ರೂ. ಮೌಲ್ಯದ ವಸ್ತುಗಳನ್ನು ಕಳ್ಳ ದೋಚಿದ್ದಾನೆ. ದಂಪತಿಗಳ ಮಗಳು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ