Breaking News

ದಸರಾ, ದೀಪಾವಳಿ ಹಬ್ಬಕ್ಕೆ ಸಿಹಿಸುದ್ದಿ – ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಇಳಿಕೆ

Spread the love

ಬೆಂಗಳೂರು: ಸಾಲು ಸಾಲು ಹಬ್ಬಗಳು ಬರುತ್ತಿರುವ ಹೊತ್ತಿನಲ್ಲೇ ಸಾರ್ವಜನಿಕರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಅಡುಗೆ ಎಣ್ಣೆ  ಮೇಲಿನ ಆಮದು ಸುಂಕ ಕಡಿತಗೊಳಿಸಿ ಕೇಂದ್ರ ಸರ್ಕಾರ  ಆದೇಶ ಹೊರಡಿಸಿದೆ.

ಹಬ್ಬದ ಸೀಸನ್  ಹೊತ್ತಲ್ಲೇ ಕೇಂದ್ರ ಸರ್ಕಾರ, ತಾಳೆ ಎಣ್ಣೆ, ಸೋಯಾ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಸೇರಿದಂತೆ ಪ್ರಮುಖ ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸಿದೆ. ಇದರ ಬೆನ್ನಲ್ಲೇ ಅಡುಗೆ ಎಣ್ಣೆಗಳ ಬೆಲೆ ಕಡಿಮೆಯಾಗುವ ಸಾಧ್ಯತೆಯಿದೆ.

ಕಳೆದ ಒಂದು ವರ್ಷದಲ್ಲಿ ಕೆಲ ಅಡುಗೆ ಎಣ್ಣೆಯ ಶೆ.20ರಷ್ಟು ಏರಿಕೆಯಾಗಿದೆ. ಸದ್ಯ ಆಮದು ಸುಂಕ ಕಡಿತಗೊಳಿಸಿರುವುದರಿಂದ ಹಬ್ಬದ ಸೀಸನ್‌ನಲ್ಲಿ ಅಡುಗೆ ಎಣ್ಣೆಯ ಬೆಲೆಯಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ.

ಯಾವುದೆಲ್ಲ ಕಡಿತ:
ಪಾಮ್‌ ಎಣ್ಣೆ ಮತ್ತು ಎಣ್ಣೆಯ ಮೇಲಿನ ಆಮದು ಸುಂಕವನ್ನು ಶೇ.10ರಿಂದ ಶೇ.5ಕ್ಕೆ ಇಳಿಸಲಾಗಿದೆ. ಸೂರ್ಯಕಾಂತಿ ಎಣ್ಣೆಯ ಮೇಲಿನ ಆಮದು ಸುಂಕವನ್ನು ಶೇ.10ರಿಂದ ಶೂನ್ಯಕ್ಕೆ ಇಳಿಸಲಾಗಿದೆ.

ಭಾರತಕ್ಕೆ ಬೇಕಾಗುವ ಒಟ್ಟು ಅಡುಗೆ ಎಣ್ಣೆಯಲ್ಲಿ ಸುಮಾರು ಮೂರನೇ ಎರಡರಷ್ಟು ಭಾಗ ಆಮದು ಮೂಲಕವೇ ಬರುತ್ತದೆ. ಮಲೇಷ್ಯಾ, ಇಂಡೋನೇಷಿಯಾ, ಅರ್ಜೆಂಟೀನಾ, ರಷ್ಯಾ ಮತ್ತು ಉಕ್ರೇನ್ ದೇಶಗಳಿಂದ ಪಾಮ್‌ ಎಣ್ಣೆ, ಸೋಯಾ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆಯನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಸುಂಕ ಕಡಿತದಿಂದ ಸೂರ್ಯಕಾಂತಿ ಎಣ್ಣೆಗೆ ಹೆಚ್ಚಿನ ಲಾಭವಾಗಲಿದೆ. ಇದು ಎಣ್ಣೆ ತಯಾರಕರಿಗೆ ಹೆಚ್ಚು ಆಕರ್ಷಕವಾಗಲಿದೆ. ಜೊತೆಗೆ ಸೋಯಾ ಎಣ್ಣೆ ಹಾಗೂ ಪಾಮ್‌ ಎಣ್ಣೆಯ ಬದಲು ಜನರು ಸೂರ್ಯಕಾಂತಿ ಎಣ್ಣೆಯನ್ನು ಹೆಚ್ಚು ಬಳಸುವಂತೆ ಮಾಡಬಹುದಾಗಿದೆ.


Spread the love

About Laxminews 24x7

Check Also

ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ ನಿರ್ಣಯಕ್ಕೆ ಮುಂದಾದ INDIA ಒಕ್ಕೂಟ

Spread the loveನವದೆಹಲಿ: ಮುಖ್ಯ ಚುನಾವಣಾ ಆಯುಕ್ತ  ಜ್ಞಾನೇಶ್ ಕುಮಾರ್ ಅವರ ವಿರುದ್ಧ ಹೊಸದಾಗಿ ಮಹಾಭಿಯೋಗ  ನಿರ್ಣಯ ಮಂಡಿಸಲು ಪ್ರತಿಪಕ್ಷಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ