Breaking News

ವಾಹನ ಸವಾರರಿಗೆ ಗುಡ್‌ನ್ಯೂಸ್: ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ ಶೇ 50 ವಿನಾಯಿತಿ

Spread the love

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಗೆ ಮತ್ತೆ ಶೇ 50% ವಿನಾಯಿತಿಗೆ ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ  ಗುಡ್​ನ್ಯೂಸ್ ನೀಡಲಾಗಿದೆ. ಜೂನ್ 21ರಿಂದ ಜುಲೈ 10ರವರೆಗೆ ಅಂದರೆ 20 ದಿನಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಲಾಗಿದೆ.

ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟಲಾಗದೆ ಪರದಾಡುತ್ತಿದ್ದ ಸವಾರರ ಹಿತದೃಷ್ಟಿಯಿಂದ, ಬಾಕಿ ಇರುವ ದಂಡದ ಮೊತ್ತದಲ್ಲಿ ಸಾರಿಗೆ ಮತ್ತು ಪೊಲೀಸ್ ಇಲಾಖೆ ಮತ್ತೆ ಶೇಕಡಾ 50ರಷ್ಟು ರಿಯಾಯಿತಿ ಘೋಷಿಸಿದೆ.

ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ಗಳಲ್ಲಿ 2026ರ ಮೇ ತಿಂಗಳಿಗಿಂತ ಮೊದಲು ದಾಖಲಾಗಿರುವ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರವರೆಗಿನ ಸುದೀರ್ಘ ಅವಧಿಯಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಅರ್ಧದಷ್ಟು ವಿನಾಯಿತಿ ನೀಡಲಾಗಿದೆ. ಈ ಸುದೀರ್ಘ ಅವಧಿಯ ಸಂಚಾರ ನಿಯಮ ಉಲ್ಲಂಘನೆ ದಂಡದ ಬಾಕಿಯನ್ನು ಸವಾರರು ಸುಲಭವಾಗಿ ಪಾವತಿಸಲು ಇದೇ ಜೂನ್ 21ರಿಂದ ಜುಲೈ 10ರವರೆಗೆ ಒಟ್ಟು 20 ದಿನಗಳ ಕಾಲಾವಕಾಶ ನೀಡಲಾಗಿದೆ.

ವಾಹನ ಸವಾರರು ತಮ್ಮ ಬಾಕಿ ದಂಡದ ಮೊತ್ತವನ್ನು ಸುಲಭವಾಗಿ ಪಾವತಿಸಲು ಸರ್ಕಾರ ಹಲವು ಆಯ್ಕೆಗಳನ್ನು ನೀಡಿದೆ. ಸಾರ್ವಜನಿಕರು ಅಸ್ತ್ರಂ ಆ್ಯಪ್, ಕೆಎಸ್‌ಪಿಎಸ್ ಆ್ಯಪ್ ಹಾಗೂ ರಾಜ್ಯಾದ್ಯಂತ ಇರುವ ಕರ್ನಾಟಕ ಒನ್ ಕೇಂದ್ರಗಳು ಸೇರಿದಂತೆ ಅಧಿಕೃತ ಡಿಜಿಟಲ್ ವೇದಿಕೆಗಳ ಮೂಲಕ ಶೇಕಡಾ 50ರಷ್ಟು ವಿನಾಯಿತಿಯ ದಂಡವನ್ನು ಪಾವತಿಸಬಹುದಾಗಿದೆ. ಕಳೆದ ವರ್ಷ ನವೆಂಬರ್​​ನಲ್ಲಿ ಕೂಡ ಶೇಕಡಾ 50ರಷ್ಟು ವಿನಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿತ್ತು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ